176
ಬೆಂಗಳೂರು: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರ ಅಸಭ್ಯ ವರ್ತನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಸಮವಸ್ತ್ರದಲ್ಲಿದ್ದಾಗಲೇ ತಮ್ಮ ಕಚೇರಿಯೊಳಗೆ ಮಹಿಳೆಯರೊಂದಿಗೆ ಸರಸವಾಡಿರುವುದು ರಹಸ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೇನು 4-5 ತಿಂಗಳಲ್ಲಿ ಸೇವೆಯಿಂದ ನಿವೃತ್ತರಾಗಬೇಕಿದ್ದ ಅಧಿಕಾರಿಯ ಈ ನಡೆಯು ಇಡೀ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆಯಾಗಿದೆ.
ಈ ‘ಕಾಮಕಾಂಡ’ದ ದೃಶ್ಯಗಳು ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಘಟನೆ ಸರ್ಕಾರದ ಗಮನಕ್ಕೆ ತಲುಪಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಕಚೇರಿಯ ಘನತೆ ಮರೆತ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿಸಿದೆ.