90
ಬೆಳ್ಳಾರೆ: ಇಲ್ಲಿನ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಮೋರಿಯಿಂದ ಕೆಳಗೆ ಬಿದ್ದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಡಬದ ಮರ್ದಾಳ ನಿವಾಸಿ ಎಂದು ಗುರುತಿಸಲಾಗಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಬರಿಮಲೆ ಪ್ರಸಾದವನ್ನು ಸುಳ್ಯಕ್ಕೆ ತಲುಪಿಸಲು ತಂದೆ-ಮಗ ಬೈಕಿನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಗಾಯಾಳು ಮಗನನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.