Home Uncategorizedಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದ 21 ಕೋಟಿಯ ನೀರಿನ ಟ್ಯಾಂಕ್!

ಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದ 21 ಕೋಟಿಯ ನೀರಿನ ಟ್ಯಾಂಕ್!

by Editor

ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ಭ್ರಷ್ಟಾಚಾರದ ಕರಾಳ ಮುಖ ಅನಾವರಣಗೊಂಡಿದೆ. ಸುಮಾರು 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಲು 21 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಬೃಹತ್ ನೀರಿನ ಟ್ಯಾಂಕ್, ಉದ್ಘಾಟನೆಗೆ ಮೊದಲೇ ಕುಸಿದು ಬಿದ್ದಿದೆ.

ಜನವರಿ 19ರಂದು ನಡೆದ ಪ್ರಾಯೋಗಿಕ ಪರೀಕ್ಷೆಯ ವೇಳೆ, 11 ಲಕ್ಷ ಲೀಟರ್ ಸಾಮರ್ಥ್ಯದ ಈ ಟ್ಯಾಂಕ್‌ಗೆ ನೀರು ತುಂಬಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. 15 ಮೀಟರ್ ಎತ್ತರದ ಈ ಕಟ್ಟಡ ನೆಲಸಮವಾದ ಪರಿಣಾಮ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ. ಕಳಪೆ ಕಾಮಗಾರಿ ಮತ್ತು ನಿರ್ಮಾಣ ಸಾಮಗ್ರಿಗಳ ಗುಣಮಟ್ಟದ ಕೊರತೆಯೇ ಈ ಅಪಘಾತಕ್ಕೆ ನೇರ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಹಣ ಪೋಲು ಮಾಡಿರುವ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕಠಿಣ ತನಿಖೆಗೆ ಆಗ್ರಹ ಕೇಳಿಬಂದಿದೆ.

You may also like

Leave a Comment