126
ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಈ ದಿನ ರಥಸಪ್ತಮಿ ದಿನವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ರಥಸಪ್ತಮಿ ದಿನದ ಮಹತ್ವ, ಯೋಗದಿಂದ ಸೂರ್ಯನಮಸ್ಕಾರ ಮಾಡುವುದರಿಂದ ಆರೋಗ್ಯದ ಸುಧಾರಣೆ ಕುರಿತಾಗಿ ಶಾಲಾ ಮುಖ್ಯೋಪಾಧ್ಯಾಯರಾದ
ಶ್ರೀ ಪ್ರಸನ್ನ ಕೆ ರವರು ವಿದ್ಯಾರ್ಥಿಗಳಿಗೆ ತಿಳಿಸಿದರು.ಯೋಗ ಶಿಕ್ಷಕರುಗಳಾದ ನವೀನ್ ಕುಮಾರ್ ಬಿ ಹಾಗೂ ಶ್ರೀಮತಿ ವೀಣಾ ರವರು ವಿದ್ಯಾರ್ಥಿಗಳಿಗೆ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಪ್ರಸಾದ್ ಕೆದಿಲಾಯರು ಮತ್ತು ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.