Home ಜಿಲ್ಲೆಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ

by Editor

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ನೆರವೇರಿಸಿ ಮಾತನಾಡುತ್ತಾ ಗಣರಾಜ್ಯೋತ್ಸವ ದಿನದ ಮಹತ್ವವನ್ನು ಭಾರತೀಯ ಪ್ರಜೆಗಳಾದ ನಾವೆಲ್ಲರೂ ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದು ಹೇಳುತ್ತಾ ,ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ಸವಿವರವಾಗಿ ತಿಳಿಸಿಕೊಟ್ಟರು.

ಸಂಸ್ಥೆಯ ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಇವರು  “ವಿದ್ಯಾರ್ಥಿಗಳಾದ ತಾವು ಮೂಲಭೂತ ಹಕ್ಕುಗಳನ್ನು ಚಲಾಯಿಸುತ್ತಾ ಮೂಲಭೂತ ಕರ್ತವ್ಯಗಳನ್ನು ಮರೆಯಬಾರದು” ಎಂದು ತಿಳಿಸಿ ಸರ್ವರಿಗೂ ವಂದಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ,ಸಂಸ್ಥೆಯ ಸಹ ಆಡಳಿತಾಧಿಕಾರಿ ಹೇಮಾ ನಾಗೇಶ ರೈ ಮಾಳ , ಕನ್ನಡ ಮಾಧ್ಯಮದ ಮುಖ್ಯಗುರು ವಿನಯ .ವಿ. ಶೆಟ್ಟಿ , ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ನಂತರ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಸಹಕರಿಸಿದರು.

You may also like

Leave a Comment