Home ಶಿಕ್ಷಣಅಬೀರ ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಅಬೀರ ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

by Editor

ಕಡಬ ತಾಲೂಕು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಬೀರ ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ನಿತ್ಯ ಕೆಳಗಿನ ಮನೆ ನೆರವೇರಿಸಿದರು. ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಅಬೀರ ಮಾತನಾಡಿ ಭಾರತವು ರಾಜಪ್ರಭುತ್ವದ ಅಡಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆಯಡಿಗೆ ಬಂದ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ.ನಮಗೆಲ್ಲರಿಗೂ ಈ ದೇಶದ ಸಂವಿಧಾನದ ಪ್ರಜಾಸತ್ತಾತ್ಮಕ ಮೌಲ್ಯ ಮತ್ತು ನಾಗರಿಕ ಹೊಣೆಗಾರಿಕೆಯನ್ನು ನೆನಪಿಸುವ ದಿನವಾಗಿದ್ದು ಅದರ ಆಶಯದಂತೆ ನಾವೆಲ್ಲರೂ ನಡೆಯಬೇಕು ಎಂದರು.ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಗೌರಿ ಮಾದೋಡಿ, ಅಂಗನವಾಡಿ ಕೇಂದ್ರದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಿನೇಶ್ ಕೆಳಗಿನ ಮನೆ, ಅವ್ವಮ್ಮ ಅಜಿರಂಗಳ,ಸಾಜಿದ ಅಜಿರಂಗಳ ,ಕಾವ್ಯ ಕಂಡೂರು,ಲೇಖ ಕಂಡೂರು ಉಪಸ್ಥಿತರಿದ್ದರು.ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಬೇಬಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಸಹಾಯಕಿ ವಾರಿಜಾ ಸಹಕರಿಸಿದರು.

You may also like

Leave a Comment