92
ಕರ್ನೂರು: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯ ದಿನಾಚರಣೆಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಬಿ.ಹೆಚ್. ಸೂಫಿ ಅವರು ಧ್ವಜಾರೋಹಣ ನೆರವೇರಿಸಿ, ದೇಶದ ಸಂವಿಧಾನ ಮತ್ತು ಹಕ್ಕುಗಳ ಕುರಿತು ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡು ದೇಶಭಕ್ತಿ ಮೆರೆದರು.