73
ಪುತ್ತೂರು: ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳು ಹಾಗೂ ಜನಪದ ಕ್ರೀಡೆಗಳ ಸಂರಕ್ಷಣೆಗಾಗಿ “ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದ.ಕ” ವತಿಯಿಂದ ಫೆಬ್ರವರಿ 1ರಂದು ಪುತ್ತೂರಿನಲ್ಲಿ ಬೃಹತ್ ಸಮಾಲೋಚನಾ ಸಭೆ ಆಯೋಜಿಸಲಾಗಿದೆ.


ಬೆಳಿಗ್ಗೆ 10 ಗಂಟೆಗೆ ನಗರದ ಕೊಟೇಚಾ ಹಾಲ್‌ನಲ್ಲಿ ನಡೆಯಲಿರುವ ಈ ಸಭೆ “ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ” ಎಂಬ ಘೋಷವಾಕ್ಯದಡಿ ನಡೆಯಲಿದೆ. ಜಾತಿ, ರಾಜಕೀಯ ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸಂಸ್ಕೃತಿ ಪ್ರೇಮಿಗಳು ಒಂದಾಗಿ ಭಾಗವಹಿಸುವಂತೆ ವೇದಿಕೆ ಕರೆ ನೀಡಿದೆ.


ತುಳುನಾಡಿನ ಸಂಪ್ರದಾಯ, ಆಚರಣೆಗಳು ಹಾಗೂ ಮಣ್ಣಿನ ಸೊಗಡನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಸಭೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಪ್ರಕಟಣೆ ತಿಳಿಸಿದೆ.