Home ರಾಜ್ಯಡಿಜಿಟಲ್ ಜಾಲದಿಂದ ಮಕ್ಕಳ ರಕ್ಷಣೆಗೆ ಸರ್ಕಾರ ಸಜ್ಜು: ವಿಧಾನಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಡಿಜಿಟಲ್ ಜಾಲದಿಂದ ಮಕ್ಕಳ ರಕ್ಷಣೆಗೆ ಸರ್ಕಾರ ಸಜ್ಜು: ವಿಧಾನಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

by Editor

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಅವರು, ಸಣ್ಣ ಮಕ್ಕಳು ಸಾಮಾಜಿಕ ಜಾಲತಾಣಗಳ (Social Media) ಅತಿಯಾದ ಬಳಕೆಯಿಂದ ದಾರಿ ತಪ್ಪುತ್ತಿರುವುದು ಹಾಗೂ ಆಕರ್ಷಿತರಾಗುತ್ತಿರುವ ಗಂಭೀರ ವಿಷಯವನ್ನು ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರವು ಮಕ್ಕಳನ್ನು ಈ ಡಿಜಿಟಲ್ ವ್ಯಸನದಿಂದ ಮುಕ್ತಗೊಳಿಸಲು ‘ಡಿಜಿಟಲ್ ಡಿಟಾಕ್ಸಿಫಿಕೇಶನ್’ (Digital Detoxification) ಯೋಜನೆಗೆ ಮುಂದಾಗಿದೆ ಎಂದು ಸದನಕ್ಕೆ ತಿಳಿಸಿದರು.

ಈಗಾಗಲೇ ಆಸ್ಟ್ರೇಲಿಯಾ, ಫ್ರಾನ್ಸ್ ಮತ್ತು ಫಿನ್ಲೆಂಡ್‌ನಂತಹ ದೇಶಗಳು ಸಾಮಾಜಿಕ ಜಾಲತಾಣಗಳ ಬಳಕೆಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಿವೆ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಜಾಲತಾಣಗಳ ಜವಾಬ್ದಾರಿಯುತ ಬಳಕೆ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿವೆ. ಯುವಜನತೆ ಇಂಟರ್ನೆಟ್ ಲೋಕದಲ್ಲಿ ಮುಳುಗುತ್ತಿರುವುದು ಆತಂಕಕಾರಿಯಾಗಿದ್ದು, ಇದನ್ನು ತಡೆಯಲು ಐಟಿ-ಬಿಟಿ ಇಲಾಖೆಯು ಮೆಟಾ (Meta) ಸಹಯೋಗದೊಂದಿಗೆ ಈಗಾಗಲೇ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಸಚಿವರು ವಿವರಿಸಿದರು.

ಈ ಡಿಜಿಟಲ್ ಡಿಟಾಕ್ಸ್ ಅಭಿಯಾನದಲ್ಲಿ ಇದುವರೆಗೆ ಸುಮಾರು 3 ಲಕ್ಷಕ್ಕೂ ಹೆಚ್ಚು ಮಕ್ಕಳು ಮತ್ತು 1 ಲಕ್ಷ ಶಿಕ್ಷಕರು ಭಾಗವಹಿಸಿದ್ದು, ಜಾಲತಾಣಗಳ ಮಿತಿಮೀರಿದ ಬಳಕೆಯಿಂದ ಆಗುವ ಹಾನಿಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆ ಮಕ್ಕಳ ಭವಿಷ್ಯಕ್ಕೆ ಮಾರಕವಾಗಲಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಇದಕ್ಕೆ ಸೂಕ್ತ ಕಡಿವಾಣ ಹಾಕಲು ಮತ್ತು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.

You may also like

Leave a Comment