99
ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಪರ ಬೇಹುಗಾರಿಕೆ ನಡೆಸುತ್ತಿದ್ದ ಇ-ಮಿತ್ರ ಅಧಿಕಾರಿಯನ್ನು ರಾಜಸ್ಥಾನ ಪೊಲೀಸರ ಗುಪ್ತಚರ ಘಟಕ ಬಂಧಿಸಿದೆ. ಪೋಕರನ್‌ನ ಸಂಕ್ಲಾ ಗ್ರಾಮದ ನಿವಾಸಿ ಝಬರಾರಾಮ್ ಬಂಧಿತ ಆರೋಪಿಯಾಗಿದ್ದು, ಈತ ಸುದೀರ್ಘ ಕಾಲದಿಂದ ಗಡಿ ಭಾಗದಲ್ಲಿರುವ ಭಾರತೀಯ ಸೇನೆಯ ವ್ಯೂಹಾತ್ಮಕ ಮತ್ತು ಸೂಕ್ಷ್ಮ ಮಾಹಿತಿಗಳನ್ನು ಗಡಿಯಾಚೆಗೆ ರವಾನಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
