Home ಬ್ರೇಕಿಂಗ್ ನ್ಯೂಸ್ಬಜೆಟ್ ಮುನ್ನವೇ ಬಿಗ್ ಶಾಕ್: LPG ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ!

ಬಜೆಟ್ ಮುನ್ನವೇ ಬಿಗ್ ಶಾಕ್: LPG ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ!

by Editor

ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಸಾಮಾನ್ಯ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಭರ್ಜರಿ 50 ರೂಪಾಯಿ ಹೆಚ್ಚಳ ಮಾಡಿವೆ. ಈ ಏರಿಕೆಯು ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ಉದ್ದಿಮೆದಾರರ ಜೇಬಿಗೆ ಕತ್ತರಿ ಹಾಕಲಿದ್ದು, ಹೊರಗಿನ ಆಹಾರ ಪದಾರ್ಥಗಳ ಬೆಲೆ ಏರಿಕೆಯ ಆತಂಕ ಮೂಡಿಸಿದೆ.

ಸಮಾಧಾನಕರ ವಿಷಯವೆಂದರೆ, 14 ಕೆಜಿ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಏಪ್ರಿಲ್ 8, 2025 ರಂದು ನಿಗದಿಯಾಗಿದ್ದ ಹಳೆಯ ದರವೇ ಮುಂದುವರಿಯಲಿದೆ. ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ರಿಲೀಫ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ, ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ ಶಾಕ್ ನೀಡಿದೆ.

You may also like

Leave a Comment