Home ಬ್ರೇಕಿಂಗ್ ನ್ಯೂಸ್ಕೇಂದ್ರ ಬಜೆಟ್ ಕರ್ನಾಟಕಕ್ಕೆ ನೀಡಿದ ‘ಚೊಂಬು’: ಸಿಎಂ ಸಿದ್ದರಾಮಯ್ಯ ಆಕ್ರೋಶ

ಕೇಂದ್ರ ಬಜೆಟ್ ಕರ್ನಾಟಕಕ್ಕೆ ನೀಡಿದ ‘ಚೊಂಬು’: ಸಿಎಂ ಸಿದ್ದರಾಮಯ್ಯ ಆಕ್ರೋಶ

by Editor
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬಜೆಟ್‌ನಲ್ಲಿ ಒಂದು ‘ಚೊಂಬು’ ನೀಡಿದೆ” ಎಂದು ಅವರು ಲೇವಡಿ ಮಾಡಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ ನೀಡುವ ಬಗ್ಗೆ ಬಜೆಟ್‌ನಲ್ಲಿ ಉಲ್ಲೇಖವೇ ಇಲ್ಲ. ಬೆಂಗಳೂರು-ಮುಂಬೈ ಹಾಗೂ ಬೆಂಗಳೂರು-ಮಂಗಳೂರು ರೈಲುಗಳ ಬೇಡಿಕೆ ಇತ್ತಾದರೂ, ಐದು ವರ್ಷಗಳ ಅವಧಿಯ ಹೈಸ್ಪೀಡ್ ರೈಲುಗಳನ್ನು ಘೋಷಿಸಿ ಕೈತೊಳೆದುಕೊಳ್ಳಲಾಗಿದೆ. ಈ ಬಜೆಟ್ ರಾಜ್ಯದ ಜನರ ಆಕಾಂಕ್ಷೆಗಳನ್ನು ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅವರು ಗುಡುಗಿದ್ದಾರೆ.

You may also like

Leave a Comment