ದೇವದುರ್ಗ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ST) ಸೇರಿಸಲು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತಿಂಥಣಿ ಬ್ರಿಡ್ಜ್‌ನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಲಾಗಿದ್ದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅದನ್ನು ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಕಾಗಿನೆಲೆ ಗುರುಪೀಠದ ಕೊಡುಗೆಯನ್ನು ಸ್ಮರಿಸಿದ ಅವರು, “ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ ಮತ್ತು ಆಧ್ಯಾತ್ಮದ ಜೊತೆಗೆ ಜಾತ್ಯತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು. ಸಮಸಮಾಜ ನಿರ್ಮಾಣವೇ ಈ ಪೀಠದ ಮೂಲ ಉದ್ದೇಶ” ಎಂದರು. ಶ್ರೀಗಳ ಅಗಲಿಕೆಗೆ ಸಂತಾಪ ಸೂಚಿಸಿದ ಅವರು, ಸಮಾಜಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದರು.