Home ಮಂಗಳೂರುಮುಕ್ಕೂರು: ಫೆ. 15ರಂದು ಅಂತರ್ ಜಿಲ್ಲಾ ಮಟ್ಟದ ಕವಿಗೋಷ್ಠಿ

ಮುಕ್ಕೂರು: ಫೆ. 15ರಂದು ಅಂತರ್ ಜಿಲ್ಲಾ ಮಟ್ಟದ ಕವಿಗೋಷ್ಠಿ

by Editor

ಮುಕ್ಕೂರು: ಸ್ಥಳೀಯ ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲದ ಆಶ್ರಯದಲ್ಲಿ, ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ ಸಹಕಾರದೊಂದಿಗೆ ‘ನೇಸರ ದಶಪ್ರಣತಿ’ ಅಂಗವಾಗಿ ಅಂತರ್ ಜಿಲ್ಲಾ ಮಟ್ಟದ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಫೆಬ್ರವರಿ 15, 2026ರ ಭಾನುವಾರ ಬೆಳಿಗ್ಗೆ 9.00 ಗಂಟೆಗೆ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಕೊಡಗು ಜಿಲ್ಲೆಗಳ ಆಸಕ್ತ ಕವಿಗಳಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವವರು ತಮ್ಮ ಸ್ವರಚಿತ ಕವನದೊಂದಿಗೆ ಫೆಬ್ರವರಿ 05ರ ಒಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ ಸಂಘಟಕರು ಮೊಬೈಲ್ ಸಂಖ್ಯೆ 9740189529 ಅನ್ನು ಸಂಪರ್ಕಿಸಲು ಕೋರಿದ್ದಾರೆ. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೇಸರ ದಶಪ್ರಣತಿ ಸಮಿತಿ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

Leave a Comment