Home ಕ್ರೈಂಚುನಾವಣಾ ಆಸೆಗಾಗಿ ಮಗಳನ್ನೇ ಕೊಂದ ತಂದೆ: ಮಹಾರಾಷ್ಟ್ರದ ವ್ಯಕ್ತಿಯ ಅಮಾನವೀಯ ಕೃತ್ಯ

ಚುನಾವಣಾ ಆಸೆಗಾಗಿ ಮಗಳನ್ನೇ ಕೊಂದ ತಂದೆ: ಮಹಾರಾಷ್ಟ್ರದ ವ್ಯಕ್ತಿಯ ಅಮಾನವೀಯ ಕೃತ್ಯ

by Editor

ನಿಜಾಮಾಬಾದ್: ರಾಜಕೀಯ ಆಕಾಂಕ್ಷೆಯು ಮನುಷ್ಯನನ್ನು ಎಷ್ಟು ಕ್ರೂರನನ್ನಾಗಿ ಮಾಡಬಲ್ಲದು ಎಂಬುದಕ್ಕೆ ತೆಲಂಗಾಣದ ನಿಜಾಮಾಬಾದ್‌ನಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಅಡ್ಡಿಯಾಗುತ್ತಾಳೆ ಎಂಬ ಕಾರಣಕ್ಕೆ ತಂದೆಯೊಬ್ಬ ತನ್ನ ಆರು ವರ್ಷದ ಮಗಳನ್ನೇ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದಾನೆ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಪಾಂಡುರಂಗ ಕೊಂಡ್ಮಂಗಳೆ (28) ಬಂಧಿತ ಆರೋಪಿ. ಈತನಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ಮಹಾರಾಷ್ಟ್ರದ ನಿಯಮದಂತೆ ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ತನ್ನ ಮಗಳು ಪ್ರಾಚಿಯನ್ನು (6) ತೆಲಂಗಾಣದ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಗೆ ತಳ್ಳಿ ಹತ್ಯೆ ಮಾಡಿದ್ದಾನೆ.

ಕೆಲ ದಿನಗಳ ಹಿಂದೆ ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರ ವಿಚಾರಣೆ ವೇಳೆ ಮಗಳು ಆಸ್ಪತ್ರೆಯಲ್ಲಿದ್ದಾಳೆ ಎಂದು ಸುಳ್ಳು ಹೇಳಿ ದಾರಿ ತಪ್ಪಿಸಲು ಯತ್ನಿಸಿದರೂ, ತೀವ್ರ ವಿಚಾರಣೆಯ ನಂತರ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ರಾಜಕೀಯ ಲಾಭಕ್ಕಾಗಿ ಸ್ವಂತ ಮಗಳನ್ನೇ ಬಲಿಪಡೆದ ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

You may also like

Leave a Comment