Home ತಂತ್ರಜ್ಞಾನಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ: 3,862 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪನೆಗೆ ಅನುಮೋದನೆ

ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ: 3,862 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪನೆಗೆ ಅನುಮೋದನೆ

by Editor

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣ ನೀಡಲು ಸಿದ್ದರಾಮಯ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ರಾಜ್ಯದ 3,862 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪಿಸಲು ಯೋಜನಾ ಅನುಮೋದನಾ ಮಂಡಳಿ ಗ್ರೀನ್ ಸಿಗ್ನಲ್ ನೀಡಿದೆ.

ಈ ಉದ್ದೇಶಕ್ಕಾಗಿ ಸರ್ಕಾರ ಒಟ್ಟು 9154.80 ಲಕ್ಷ ರೂ. ವೆಚ್ಚದ ಯೋಜನೆಗೆ ಹಸಿರು ನಿಶಾನೆ ತೋರಿಸಿದೆ. ಸರ್ಕಾರಿ ಶಾಲಾ ಮಕ್ಕಳಿಗೂ ಖಾಸಗಿ ಶಾಲೆಗಳಂತೆ ಡಿಜಿಟಲ್ ಸೌಲಭ್ಯಗಳು ಸಿಗಬೇಕು ಎಂಬುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಹೈಟೆಕ್ ಭಾಗ್ಯದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲಿದ್ದು, ಆಧುನಿಕ ತಂತ್ರಜ್ಞಾನದ ಮೂಲಕ ಪಾಠ ಪ್ರವಚನಗಳು ನಡೆಯಲಿವೆ.

You may also like

Leave a Comment