Home ನಿಧನ ವಾರ್ತೆಮಂಗಳೂರು: ಸಂಚಾರಿ ಠಾಣೆಯ ಪೊಲೀಸ್ ಸಿಬ್ಬಂದಿ ಮಾರುತಿ ಲಮಾಣಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮಂಗಳೂರು: ಸಂಚಾರಿ ಠಾಣೆಯ ಪೊಲೀಸ್ ಸಿಬ್ಬಂದಿ ಮಾರುತಿ ಲಮಾಣಿ ಚಿಕಿತ್ಸೆ ಫಲಕಾರಿಯಾಗದೆ ಸಾವು

by Editor

ಮಂಗಳೂರು ನಗರದ ಸಶಸ್ತ್ರ ಮೀಸಲು ಪಡೆಯ (CAR) ಪೊಲೀಸ್ ಸಿಬ್ಬಂದಿ, ಹಾವೇರಿ ಮೂಲದ ಮಾರುತಿ ಲಮಾಣಿ (36) ಅವರು ತೀವ್ರ ರಕ್ತದೊತ್ತಡದಿಂದ ಇಂದು ನಿಧನರಾದರು. 2016ನೇ ಬ್ಯಾಚ್‌ನ ಸಿಬ್ಬಂದಿಯಾದ ಇವರು ಪ್ರಸ್ತುತ ಸಂಚಾರಿ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಎರಡು ದಿನಗಳ ಹಿಂದೆ ರಾತ್ರಿ ಪಾಳಿ ಮುಗಿಸಿ ಮನೆಗೆ ಮರಳಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಆರೋಗ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರ ಪತ್ನಿಯೂ ಪೊಲೀಸ್ ಇಲಾಖೆಯಲ್ಲಿದ್ದು, ದಂಪತಿಗೆ ಇಬ್ಬರು ಪುತ್ರಿಯರಿದ್ದಾರೆ. ಮಾರುತಿ ಲಮಾಣಿ ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆ ತೀವ್ರ ಸಂತಾಪ ವ್ಯಕ್ತಪಡಿಸಿದೆ.

You may also like

Leave a Comment