Home ಬ್ರೇಕಿಂಗ್ ನ್ಯೂಸ್ಅಕ್ರಮ ನಾಡ ಬಂದೂಕು ತಯಾರಿಕೆ ಪ್ರಕರಣ: ಕಾರ್ಪೆಂಟರ್ ಬಂಧನ 7 ಸಿಂಗಲ್ ಬ್ಯಾರಲ್ ಬಂದೂಕುಗಳು, ಕಚ್ಚಾವಸ್ತು ವಶ

ಅಕ್ರಮ ನಾಡ ಬಂದೂಕು ತಯಾರಿಕೆ ಪ್ರಕರಣ: ಕಾರ್ಪೆಂಟರ್ ಬಂಧನ 7 ಸಿಂಗಲ್ ಬ್ಯಾರಲ್ ಬಂದೂಕುಗಳು, ಕಚ್ಚಾವಸ್ತು ವಶ

by Editor

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸುತ್ತಿದ್ದ ವ್ಯಕ್ತಿಯನ್ನು ಶಿಕಾರಿಪುರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಲಕ್ಷ್ಮಣಪ್ಪ (ವೃತ್ತಿಯಲ್ಲಿ ಕಾರ್ಪೆಂಟರ್). ಆರೋಪಿಯು ತನ್ನ ಬಿಡುವಿನ ವೇಳೆಯಲ್ಲಿ ಅಕ್ರಮವಾಗಿ ಸಿಂಗಲ್ ಬ್ಯಾರಲ್ ನಾಡ ಬಂದೂಕುಗಳನ್ನು ತಯಾರಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ, ಆರೋಪಿ ತನ್ನ ಮನೆಯ ಪಕ್ಕದಲ್ಲಿರುವ ಹಳೆಯ ಮನೆಯಲ್ಲಿ ಬಂದೂಕು ತಯಾರಿಸುತ್ತಿರುವುದು ಪತ್ತೆಯಾಗಿದೆ. ಸ್ಥಳದಿಂದ 7 ಸಿಂಗಲ್ ಬ್ಯಾರಲ್ ನಾಡ ಬಂದೂಕುಗಳು ಹಾಗೂ ಅವುಗಳ ತಯಾರಿಕೆಗೆ ಬಳಸುತ್ತಿದ್ದ ಕಚ್ಚಾವಸ್ತುಗಳು ಮತ್ತು ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಾತ್ಮಿದಾರರಿಂದ ಲಭಿಸಿದ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದ್ದು, ಆರೋಪಿಯ ವಿರುದ್ಧ ಶಸ್ತ್ರಾಸ್ತ್ರ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿ ಲಕ್ಷ್ಮಣಪ್ಪನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ಕುರಿತು ಶಿಕಾರಿಪುರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

You may also like

Leave a Comment