Home ಕ್ರೈಂಇಸ್ಲಾಮಾಬಾದ್‌ನಲ್ಲಿ ಭೀಕರ ಸ್ಫೋಟ: 68 ಸಾವು, 160ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್‌ನಲ್ಲಿ ಭೀಕರ ಸ್ಫೋಟ: 68 ಸಾವು, 160ಕ್ಕೂ ಹೆಚ್ಚು ಜನರಿಗೆ ಗಾಯ

by Editor

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ತರ್ಲೈ ಪ್ರದೇಶದಲ್ಲಿ ಶುಕ್ರವಾರ ಭೀಕರ ಬಾಂಬ್ ಸ್ಫೋಟ ಸಂಭವಿಸಿದೆ. ಇಲ್ಲಿನ ಖದೀಜತ್-ಉಲ್-ಕುಬ್ರಾ ಶಿಯಾ ಇಮಾಮ್ ಬರ್ಗಾ ಮಸೀದಿಯಲ್ಲಿ ನಡೆದ ಈ ದುರಂತದಲ್ಲಿ ಕನಿಷ್ಠ 68 ಜನರು ಸಾವನ್ನಪ್ಪಿದ್ದು, 160ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಘಟನೆಯಿಂದಾಗಿ ಇಡೀ ಪ್ರದೇಶದಲ್ಲಿ ಭೀತಿ ಆವರಿಸಿದ್ದು, ಅಧಿಕಾರಿಗಳು ತಕ್ಷಣವೇ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಗಾಯಾಳುಗಳನ್ನು ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ (PIMS) ಮತ್ತು ಪಾಲಿಕ್ಲಿನಿಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಧಾವಿಸಿರುವ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಚುರುಕಿನಿಂದ ಸಾಗಿದೆ. ಸ್ಫೋಟದ ಸ್ವರೂಪ ಮತ್ತು ಅದರ ಹಿಂದಿರುವ ಕೈವಾಡದ ಬಗ್ಗೆ ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

You may also like

Leave a Comment