Home ರಾಜ್ಯಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಇನ್ಮುಂದೆ ‘ಜೀವಿತ ಪ್ರಮಾಣಪತ್ರ’ ಕಡ್ಡಾಯ?

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಇನ್ಮುಂದೆ ‘ಜೀವಿತ ಪ್ರಮಾಣಪತ್ರ’ ಕಡ್ಡಾಯ?

by Editor

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣ ದುರುಪಯೋಗಕ್ಕೆ ಲಗಾಮು ಹಾಕಲು ಸರ್ಕಾರ ಈಗ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ನೀಡಿದ್ದ ಲಿಖಿತ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಿವೃತ್ತ ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಪ್ರತಿ ವರ್ಷ ಬ್ಯಾಂಕ್‌ಗಳಿಗೆ ಜೀವಿತ ಪ್ರಮಾಣಪತ್ರ ಸಲ್ಲಿಸುವ ಮಾದರಿಯನ್ನೇ ಇಲ್ಲೂ ಅಳವಡಿಸಲು ಸೂಚಿಸಲಾಗಿದೆ. ಈ ಬಗ್ಗೆ ತಕ್ಷಣ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಆದೇಶಿಸಿದ್ದಾರೆ.

ಪ್ರಸ್ತುತ ಯೋಜನೆಯಡಿ ಸುಮಾರು 1.24 ಕೋಟಿ ಫಲಾನುಭವಿಗಳಿದ್ದು, ಸರ್ಕಾರ ಭಾರಿ ಮೊತ್ತದ ಹಣವನ್ನು ವ್ಯಯಿಸುತ್ತಿದೆ. ಮರಣ ಹೊಂದಿದವರ ಹೆಸರಿನಲ್ಲಿ ಹಣ ಪಾವತಿಯಾಗುತ್ತಿರುವುದನ್ನು ತಡೆದು, ಸರ್ಕಾರದ ಹಣ ಸೋರಿಕೆಯನ್ನು ನಿಲ್ಲಿಸುವುದು ಈ ನಿರ್ಧಾರದ ಹಿಂದಿನ ಪ್ರಮುಖ ಉದ್ದೇಶವಾಗಿದೆ. ಇದರಿಂದ ಅರ್ಹರಿಗೆ ಮಾತ್ರ ಯೋಜನೆಯ ಲಾಭ ತಲುಪುವಂತಾಗುತ್ತದೆ.

You may also like

Leave a Comment