Home ಮಾರುಕಟ್ಟೆಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ

Foundation Day of Shri Venkataramana Credit Co-operative Society

by Editor

 

ಸುಳ್ಯ: ಸುಳ್ಯದ ಗೌಡರ ಯುವ ಸೇವಾ ಸಂಘದ ಪ್ರವರ್ತಿತ ಸಂಸ್ಥೆಯಾದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಫೆ. 9ರಂದು ಪ್ರಧಾನ ಕಚೇರಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕ್ರೈಸ್ತ ಅಲ್ಪಸಂಖ್ಯಾತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಿಲಿಯಂ ಲಸ್ರಾದೋ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಕೆ.ಸಿ. ಸದಾನಂದ ಅವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಸುಳ್ಯ ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ ಭಾಗವಹಿಸಿ ಮಾತನಾಡಿದರು. ಸಂಘದ ಮಾಜಿ ಅಧ್ಯಕ್ಷರಾದ ಪಿ.ಸಿ. ಜಯರಾಮ, ನಿತ್ಯಾನಂದ ಮುಂಡೋಡಿ ಹಾಗೂ ನಿರ್ದೇಶಕರಾದ ಜಾಕೆ ಸದಾನಂದ, ಪಿ.ಎಸ್. ಗಂಗಾಧರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಂಘದ ಬೆಳವಣಿಗೆಗೆ ತಮ್ಮ ಶುಭಾಶಯಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ನಿರ್ದೇಶಕರಾದ ಸದಾನಂದ ಮಾವಜಿ, ದಾಮೋದರ ನಾರ್ಕೋಡು, ಕೆ.ಸಿ. ನಾರಾಯಣ ಗೌಡ, ಚಂದ್ರ ಕೋಲ್ಟಾರ್, ದೊಡ್ಡಣ್ಣ ಬರಮೇಲು, ಡಾ. ಎನ್. ಜ್ಞಾನೇಶ್, ಲಕ್ಷ್ಮೀನಾರಾಯಣ ನಡ್ಕ, ನಳಿನಿ ಸೂರಯ್ಯ, ಶೈಲೇಶ್ ಅಂಬೆಕಲ್ಲು, ಪ್ರೇಮಾ ಕೆ.ಎಲ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್ ಹಾಗೂ ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಮೇರ್ಕಜೆ ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಕೆ.ಟಿ. ವಿಶ್ವನಾಥ್ ಅವರು ನಿರೂಪಿಸಿದರು.

You may also like

Leave a Comment