Home ಕ್ರೈಂಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಪತ್ನಿ ಕುರಿತು ಅವಹೇಳನಕಾರಿ ಪೋಸ್ಟ್ — ಆರೋಪಿ ಬಂಧನ!

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಪತ್ನಿ ಕುರಿತು ಅವಹೇಳನಕಾರಿ ಪೋಸ್ಟ್ — ಆರೋಪಿ ಬಂಧನ!

Mangaluru: Man Arrested for Posting Derogatory Content About MLA Vedavyas Kamath’s Wife

by Editor

 

ಮಂಗಳೂರು, ಫೆ.09: ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ಪತ್ನಿಯನ್ನು ಅವಹೇಳನಗೊಳಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸಂದೇಶ ಪ್ರಕಟಿಸಿದ ಆರೋಪಿಯನ್ನು Bunder Police Station ವ್ಯಾಪ್ತಿಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಟ್ವಾಳ ಮೂಲದ ಶರಣ್ ರೈ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಆಡಿದ್ದಾರೆ ಎನ್ನಲಾದ ಮಾತುಗಳನ್ನು ತಿರುಚಿ, ಅದನ್ನು ಶಾಸಕ ವೇದವ್ಯಾಸ ಕಾಮತ್ ಅವರ ಪತ್ನಿಗೆ ಅನ್ವಯಿಸಿ ಅತ್ಯಂತ ಕೀಳುಮಟ್ಟದ ಹಾಗೂ ಅವಮಾನಕಾರಿ ಸಂದೇಶವನ್ನು ಆರೋಪಿಯು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದನು ಎಂಬ ಆರೋಪ ಇದೆ.

ಗೃಹಿಣಿಯಾಗಿರುವ ಶಾಸಕರ ಪತ್ನಿಗೆ ಅಗೌರವ ತೋರುವ ಹಾಗೂ ಮಹಿಳೆಯರ ಬಗ್ಗೆ ಕೀಳು ಅಭಿರುಚಿಯನ್ನು ಪ್ರತಿಬಿಂಬಿಸುವ ಈ ಪೋಸ್ಟ್ ವಿರುದ್ಧ ಜ್ಯೋತಿ ಎಂಬುವವರು ಬಂದರು ಠಾಣೆಗೆ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಮಂಗಳೂರು ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಿಳೆಯರ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ಈ ರೀತಿಯ ಅಪರಾಧಗಳಲ್ಲಿ ತೊಡಗುವವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

You may also like

Leave a Comment