ಕಾಣಿಯೂರು ಶಾಲಾ ರಂಗಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ 
ಕರ್ನಾಟಕ ಬ್ಯಾಂಕ್ ನ ಸಿ.ಎಸ್.ಆರ್. ಫಂಡ್ ವತಿಯಿಂದ ಮಂಜೂರುಗೊಂಡ ರೂ 10 ಲಕ್ಷದಲ್ಲಿ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣವಾಗಲಿರುವ ಶಾಲಾ ರಂಗಮಂದಿರಕ್ಕೆ ಭೂಮಿ ಪೂಜೆಯು ನಡೆಯಿತು. ಅರ್ಚಕ ಪ್ರಶಾಂತ್ ಭಟ್ ಕಟ್ಟತ್ತಾರು ಅವರು ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಗೌಡ ಮುಗರಂಜ, ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯೆ ಗೌರಿ ಮಾದೋಡಿ, ಕಾಣಿಯೂರು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಅನಿಲ, ಉಪಾಧ್ಯಕ್ಷೆ ಯಶೋದಾ ನೇರೋಳ್ತಡ್ಕ, ಕಾಣಿಯೂರು ಶಾಲಾ ಮುಖ್ಯಗುರು ಬಾಲಕೃಷ್ಣ, ಕಾಣಿಯೂರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾರ್ಯದರ್ಶಿ ರವೀಂದ್ರ ಅನಿಲ, ಕಾಣಿಯೂರು ಶ್ರೀ ಲಕ್ಹ್ಮೀನರಸಿಂಹ ಭಜನಾ ಮಂಡಳಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ನಿಕಟಪೂರ್ವ ಕೋಶಾಧಿಕಾರಿ ಲಕ್ಷ್ಮಣ ಗೌಡ ಮುಗರಂಜ, ಕಾಣಿಯೂರು ಬಿ.ಕೆ ಕಾಂಪ್ಲೆಕ್ಸ್ ಮಾಲಕ ಪ್ರದೀಪ್ ಬೊಬ್ಬೆಕೇರಿ, ಉದ್ಯಮಿಗಳಾದ ಚಂದ್ರಶೇಖರ ಬರೆಪ್ಪಾಡಿ, ಧರ್ಣಪ್ಪ ಗೌಡ ಅಂಬುಲ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ಕೊಡಿಯಾಲ ಕಲ್ಪಡ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ನ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ, ಕಾಣಿಯೂರು ಜಾತ್ರೋತ್ಸವ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಮಾದೋಡಿ, ಶ್ರೀ ಕ್ಷೇ.ಧ. ಗ್ರಾ. ಯೋಜನೆ ಕಾಣಿಯೂರು ಒಕ್ಕೂಟದ ಅಧ್ಯಕ್ಷ ಕುಸುಮಾಧರ ಅನಿಲ, ಕಾಣಿಯೂರು ಕಣ್ವರ್ಷಿ ಮಹಿಳಾ ಮಂಡಲದ ಗೌರವಾಧ್ಯಕ್ಷೆ ರೋಹಿಣಿ ಸುವರ್ಣ ಅಬೀರ, ಅಧ್ಯಕ್ಷೆ ಮಮತಾ ಅಗಳಿ ಹಾಗೂ ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.