SSLC, PUC Exam 2026: ಎಕ್ಸಾಂ ಹಾಲ್ ಟಿಕೆಟ್ ತೋರಿಸಿದರೆ ಬಾಲಕರಿಗೂ ಉಚಿತ ಬಸ್ ಪ್ರಯಾಣ
ಹಾಸನ, ಫೆಬ್ರವರಿ 20: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ ಎಂದು ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ತೆರಳುವ ಬಾಲಕರು ತಮ್ಮ ಎಕ್ಸಾಂ ಹಾಲ್ ಟಿಕೆಟ್ ತೋರಿಸಿದರೆ Karnataka State Road Transport Corporation (ಕೆಎಸ್‌ಆರ್‌ಟಿಸಿ) ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ನಿರ್ಧಾರದಿಂದ ದೂರದ ಗ್ರಾಮೀಣ ಪ್ರದೇಶಗಳಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹೆಚ್ಚು ಸಹಾಯವಾಗಲಿದೆ.
ಆದರೆ, ಈ ಕುರಿತು ಅಧಿಕೃತ ಲಿಖಿತ ಆದೇಶ ಇನ್ನೂ ಹೊರಬಂದಿಲ್ಲ. ತಾತ್ಕಾಲಿಕವಾಗಿ ಕೆಎಸ್‌ಆರ್‌ಟಿಸಿಗೆ ಮಾಹಿತಿ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬರುವ ನಿರೀಕ್ಷೆಯಿದೆ.
ಪರೀಕ್ಷಾ ಸಿದ್ಧತೆಗಳು ಸಮರ್ಪಕವಾಗಿ ನಡೆದಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಆಡಳಿತವು ತಿಳಿಸಿದೆ. ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಕೇಂದ್ರಗಳಿಗೆ ಆಗಮಿಸಿ, ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.