Home ಅರೋಗ್ಯಕುದ್ಮಾರಿನಲ್ಲಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೃಹತ್ ಉಚಿತ ಆರೋಗ್ಯ ಶಿಬಿರ

ಕುದ್ಮಾರಿನಲ್ಲಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೃಹತ್ ಉಚಿತ ಆರೋಗ್ಯ ಶಿಬಿರ

Mega Free Health Camp Organized by Savanur Primary Agricultural Credit Cooperative Society in Kudmar

by Editor

 

ಕುದ್ಮಾರು, ಫೆ.21: ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ), ಎನ್.ಜಿ ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ), ಮಂಗಳೂರು ಹಾಗೂ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರವು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇವರ ಶಾಲಾ ಆವರಣದಲ್ಲಿ ದಿನಾಂಕ 22-02-2026, ಆದಿತ್ಯವಾರ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯಲಿದೆ. ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.

ಶಿಬಿರದಲ್ಲಿ ವಿವಿಧ ಆರೋಗ್ಯ ತಪಾಸಣೆ ಸೇವೆಗಳು, ತಜ್ಞ ವೈದ್ಯರಿಂದ ಆರೋಗ್ಯ ಸಲಹೆಗಳು ಹಾಗೂ ಅಗತ್ಯವಿರುವವರಿಗೆ ಉಚಿತ ಓದುವ ಕನ್ನಡಕಗಳ ವಿತರಣೆಯೂ ನಡೆಯಲಿದೆ.

ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

You may also like

Leave a Comment