ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ತುರ್ತು ಪ್ರಕಟಣೆ: ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಬಿಡುಗಡೆ
ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಉದ್ಭವಿಸಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಅಲ್ಲಿ ವಾಸಿಸುತ್ತಿರುವ ಕರ್ನಾಟಕದ ನಾಗರಿಕರ ಸುರಕ್ಷತೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದೆ. ಸಂಕಷ್ಟದಲ್ಲಿರುವ ಕನ್ನಡಿಗರಿಗೆ ತಕ್ಷಣ ನೆರವು ಒದಗಿಸುವ ಉದ್ದೇಶದಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ವಿವಿಧ ದೇಶಗಳ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ವಿದೇಶಗಳಲ್ಲಿ ಸಿಲುಕಿರುವವರ ಮಾಹಿತಿ ಸಂಗ್ರಹಿಸಿ ಅಗತ್ಯ ನೆರವು ಒದಗಿಸಲು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಯುದ್ಧ ಪೀಡಿತ ದೇಶಗಳ ಸಹಾಯವಾಣಿ ಸಂಖ್ಯೆಗಳು:
- ಕತಾರ್ (Qatar): 00974-55647502
- ಬಹ್ರೇನ್ (Bahrain): 00973-39418071
- ಜೋರ್ಡಾನ್ (Jordan): 00962-770422276
- ಒಮನ್ (Oman): ಟೋಲ್-ಫ್ರೀ: 8007 1234 |
- ವಾಟ್ಸಾಪ್: +968 9828 2270
- ಇರಾಕ್ (Iraq): +964 771 651 1185 (ಇಂಗ್ಲಿಷ್ & ಹಿಂದಿ)
- +964 770 444 4899 (ಅರೇಬಿಕ್)
- ಕುವೈತ್ (Kuwait): +965 65501946
- ಪ್ಯಾಲೆಸ್ತೀನ್ (Palestine): +970 592916418
ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಸಂಪರ್ಕ:
ಯುದ್ಧ ಪೀಡಿತ ಪ್ರದೇಶಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳು ಸಿಲುಕಿರುವ ಮಾಹಿತಿ ಇದ್ದಲ್ಲಿ ಅಥವಾ ಸಂಪರ್ಕ ಕಳೆದುಕೊಂಡಿದ್ದರೆ, ತಕ್ಷಣ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಸಹಾಯವಾಣಿ ಸಂಖ್ಯೆ: 080-28388005
ಜಿಲ್ಲಾಡಳಿತವು ಪರಿಸ್ಥಿತಿಯನ್ನು ನಿಗಾದಲ್ಲಿಟ್ಟುಕೊಂಡಿದ್ದು, ಅಗತ್ಯವಿದ್ದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸಿ ನೆರವು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.