Home ಕ್ರೈಂಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಬೆದರಿಕೆ – ಇನ್‌ಸ್ಟಾಗ್ರಾಮ್ ಕಾಮೆಂಟ್ ಆಧಾರಿಸಿ ಎಫ್‌ಐಆರ್ ದಾಖಲು

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಬೆದರಿಕೆ – ಇನ್‌ಸ್ಟಾಗ್ರಾಮ್ ಕಾಮೆಂಟ್ ಆಧಾರಿಸಿ ಎಫ್‌ಐಆರ್ ದಾಖಲು

Bomb Blast Threat Near Ullal Mosque – FIR Registered Based on Instagram Comment

by Editor

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಬೆದರಿಕೆ – ಇನ್‌ಸ್ಟಾಗ್ರಾಮ್ ಕಾಮೆಂಟ್ ಆಧಾರಿಸಿ ಎಫ್‌ಐಆರ್ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಂಗಳೂರಿನ ಉಳ್ಳಾಲ ಪ್ರದೇಶದಲ್ಲಿರುವ ಮಸೀದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶ ಹರಿದಾಡಿದ ಹಿನ್ನೆಲೆ ಪೊಲೀಸ್ ಇಲಾಖೆ ಎಚ್ಚರಗೊಂಡಿದೆ.ಕಿಡಿಗೇಡಿಗಳಿಂದ ಕೊಲೆಯಾದ ಸುಹಾಸ್ ಶೆಟ್ಟಿ ಅವರ ಫೋಟೋ ಹೊಂದಿದ್ದ ಇನ್‌ಸ್ಟಾಗ್ರಾಮ್ ಪೋಸ್ಟ್‌ನ ಕಾಮೆಂಟ್ ವಿಭಾಗದಲ್ಲಿ ಈ ಬೆದರಿಕೆ ಸಂದೇಶ ಕಾಣಿಸಿಕೊಂಡಿದೆ.‘ಶಂಕರ್ 11916’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಿಂದ,”ಸಪೋರ್ಟ್ ಮಾಡಿ ಬ್ರೋ, ಉಳ್ಳಾಲ ಮಸೀದಿ ಹತ್ತಿರ ಬಾಂಬ್ ಬ್ಲಾಸ್ಟ್ ಮಾಡ್ತೀನಿ” ಎಂದು ಕಾಮೆಂಟ್ ಮಾಡಲಾಗಿತ್ತು ಎನ್ನಲಾಗಿದೆ.

ವಿಷಯ ಗಮನಕ್ಕೆ ಬರುತ್ತಿದ್ದಂತೆ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾರ್ವಜನಿಕರಲ್ಲಿ ಆತಂಕ ಉಂಟುಮಾಡುವ ಹಾಗೂ ಶಾಂತಿ ಭಂಗಕ್ಕೆ ಕಾರಣವಾಗುವ ರೀತಿಯ ಸಂದೇಶವಾಗಿರುವ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು, ಆರೋಪಿಯನ್ನು ಶೀಘ್ರದಲ್ಲೇ ಗುರುತಿಸಿ ಬಂಧಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಅಥವಾ ಬೆದರಿಕೆ ಸಂದೇಶಗಳನ್ನು ಹಂಚುವುದು ಗಂಭೀರ ಅಪರಾಧವಾಗಿದ್ದು, ಇಂತಹ ಪೋಸ್ಟ್‌ಗಳನ್ನು ಗಮನಿಸಿದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

You may also like

Leave a Comment