Home ಸ್ಥಳೀಯ ಸುದ್ದಿಹನುಮಗಿರಿ ಶ್ರೀ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕಾಣಿಯೂರಿನಲ್ಲಿ ಪೂರ್ವಭಾವಿ ಸಭೆ 

ಹನುಮಗಿರಿ ಶ್ರೀ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕಾಣಿಯೂರಿನಲ್ಲಿ ಪೂರ್ವಭಾವಿ ಸಭೆ 

by Editor

ಹನುಮಗಿರಿ ಶ್ರೀ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕಾಣಿಯೂರಿನಲ್ಲಿ ಪೂರ್ವಭಾವಿ ಸಭೆ

ಈಶ್ವರಮಂಗಳ ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಏಪ್ರಿಲ್ 9ರಿಂದ 12ರ ವರೆಗೆ ನಡೆಯಲಿದ್ದು ಇದರ ಅಂಗವಾಗಿ ನಡೆಯಲಿರುವ ಅಯೋಧ್ಯೆಯಿಂದ ಶ್ರೀ ರಾಮ ಜ್ಯೋತಿ ಅಗಮನ, ಕೋಟಿ ಶ್ರೀ ರಾಮ ತಾರಕ ಮಹಾಯಜ್ಞ ಜಪದೀಕ್ಷೆ ಹಾಗೂ ಲಕ್ಷೋತ್ತರ ನಾರಿಕೇಳ ಸಮರ್ಪಣ ಕಾರ್ಯಕ್ರಮದ ಪೂರ್ವಭಾವಿ ಸಭೆ ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು.ಇದೇ ವೇಳೆ ಮಾತನಾಡಿದ ಹನುಮಗಿರಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಅಚ್ಚುತ ಮೂಡೆತ್ತಾಯ ಅಯೋಧ್ಯೆಯಿಂದ ರಾಮ ಜ್ಯೋತಿಯನ್ನು ತಂದು ನಮ್ಮ ಊರಿನ ಪ್ರತಿ ದೇವಸ್ಥಾನ, ಮನೆಗಳಲ್ಲಿ ಬೆಳಗಿಸಿ ಪ್ರತಿ ಮನೆಯಿಂದ ಎರಡು ತೆಂಗಿನ ಕಾಯಿ ಸಮರ್ಪಣೆ ಮಾಡಿ ಲಕ್ಷೋತ್ತರ ನಾರಿಕೇಳ ಸಮರ್ಪಣಾ ಕಾರ್ಯಕ್ರಮ ಹಾಗೂ ಒಂದು ಕೋಟಿ ರಾಮ ನಾಮ ತಾರಕ ಮಂತ್ರ ಜಪದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಿ ಇಡೀ ಸಮಾಜ ಒಗ್ಗೂಡುವಂತೆ ಆಗಬೇಕು. ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಬ್ರಹ್ಮ ಕಲಶೋತ್ಸವ ಕಾರ್ಯದಲ್ಲಿ ನಾವೆಲ್ಲರೂ ಭಾಗಿಗಳಾಗ ಬೇಕು ಎಂದರು.ಇದೇ ವೇಳೆ ಕಾರ್ಯಕ್ರಮದ ಯಶಸ್ಸಿಗೆ ಸಮಿತಿಯನ್ನು ರಚಿಸಲಾಯಿತು. ಈ ಪೂರ್ವಭಾವಿ ಸಭೆಯಲ್ಲಿ

 ಕಾಣಿಯೂರು ಶ್ರೀ ಮಠದ ವ್ಯವಸ್ಥಾಪಕರಾದ ಶ್ರೀನಿಧಿ ಆಚಾರ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ನಹುಶ ಭಟ್, ಪದಾಧಿಕಾರಿ ರಾಕೇಶ್ ರೈ ಕೆಡೆಂಜಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ, ಕಾಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮಯ್ಯ ಗೌಡ ಅನಿಲ,

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಉದಯ ರೈ ಮಾದೋಡಿ, ಚಾರ್ವಾಕ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಕಲ್ಲೂರಾಯ ಚಾರ್ವಾಕ, ಮಾಜಿ ಅಧ್ಯಕ್ಷ ಧನಂಜಯ ಕೇನಾಜೆ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಬಾಲಕೃಷ್ಣ ಗೌಡ ಇಡ್ಯಡ್ಕ, ನಿರ್ದೇಶಕರಾದ ವಿಶ್ವನಾಥ ದೇವಿನಗರ, ಬೆಳಂದೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಂತ ಅಬೀರ, ಮಾಜಿ ಸದಸ್ಯ ಮೋಹನ್ ಅಗಳಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸದಸ್ಯರಾದ ಲಕ್ಷ್ಮಣಗೌಡ ಮುಗರಂಜ, ಕಾಣಿಯೂರು ಜಾತ್ರೋತ್ಸವ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಮಾದೋಡಿ, ಸುರೇಶ್ ಮೀಜೆ, ದೇವಕಿ ಕಟ್ಟತ್ತಾರು, ಪಾರ್ವತಿ ಕಾಣಿಯೂರು ಮತ್ತಿತರರು ಉಪಸ್ಥಿತರಿದ್ದರು. ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ ಸ್ವಾಗತಿಸಿ, ಸಾಮಾಜಿಕ ಜಾಲತಾಣ ಸಂಯೋಜಕ ಹರಿಪ್ರಸಾದ್ ಈಶ್ವರಮಂಗಲ ವಂದಿಸಿದರು.

You may also like

Leave a Comment