Home ರಾಜ್ಯಬಂಟ್ವಾಳ​ಬಂಟ್ವಾಳ ಕಂಬಳದ 15ನೇ ವರ್ಷದ ಸಂಭ್ರಮ: ಅತಿಥಿಯಾಗಿ ಆಗಮಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ.

​ಬಂಟ್ವಾಳ ಕಂಬಳದ 15ನೇ ವರ್ಷದ ಸಂಭ್ರಮ: ಅತಿಥಿಯಾಗಿ ಆಗಮಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ.

by Editor
  • ಬಂಟ್ವಾಳ ಕಂಬಳದ 15ನೇ ವರ್ಷದ ಸಂಭ್ರಮ: ಅತಿಥಿಯಾಗಿ ಆಗಮಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ.

 

ಬಂಟ್ವಾಳ: ಕರಾವಳಿಯ ಪ್ರಸಿದ್ಧ ಜಾನಪದ ಕ್ರೀಡೆಗಳಲ್ಲೊಂದಾದ ಕಂಬಳ ಕ್ರೀಡೆಗೆ ಮತ್ತಷ್ಟು ಕಳೆ ತುಂಬುವ ಉದ್ದೇಶದಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಟ್ವಾಳಕ್ಕೆ ಆಗಮಿಸುತ್ತಿದ್ದಾರೆ. ಮೂಡೂರು–ಪಡೂರು ಜೋಡುಕರೆ ಕಂಬಳ ಸಮಿತಿ ಹಾಗೂ ಬಂಟ್ವಾಳ ಕಂಬಳ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 15ನೇ ವರ್ಷದ ಹೊನಲು ಬೆಳಕಿನ “ಬಂಟ್ವಾಳ ಕಂಬಳ” ಕ್ರೀಡಾಕೂಟವು ಮಾರ್ಚ್ 7,8 2026ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನವೂರು ಗ್ರಾಮದ ಕೌಡಿಬೈಲಿನಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಈ ಕಂಬಳ ಕ್ರೀಡಾಕೂಟದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಅನೇಕ ಗಣ್ಯರು ಹಾಗೂ ಕಂಬಳ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಕರಾವಳಿ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತವಾದ ಕಂಬಳ ಕ್ರೀಡೆಗೆ ಈ ಕಾರ್ಯಕ್ರಮ ಮತ್ತಷ್ಟು ವೈಭವ ನೀಡಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ನಾವೂರು ಗ್ರಾಮದ ಕೌಡಿಬೈಲು ಮೈದಾನದಲ್ಲಿ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಸಾವಿರಾರು ಕಂಬಳ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಮಿತಿಯವರು ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

ಬಂಟ್ವಾಳದ ಇತಿಹಾಸದಲ್ಲಿಯೇ ವಿಶಿಷ್ಟವಾಗಿ ಗುರುತಿಸಿಕೊಳ್ಳುವ ಈ ಕ್ರೀಡಾಕೂಟಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಂಬಳ ಉತ್ಸವವನ್ನು ಕಣ್ತುಂಬಿಕೊಳ್ಳುವಂತೆ ಮೂಡೂರು–ಪಡೂರು ಜೋಡುಕರೆ ಕಂಬಳ ಸಮಿತಿ ಮನವಿ ಮಾಡಿದೆ.

You may also like

Leave a Comment