58
ಕುಮಾರ ಪರ್ವತಕ್ಕೆ ಟ್ರೆಕ್ಕಿಂಗ್ ಸಮಯ ಪರಿಷ್ಕರಣೆ;ಅರಣ್ಯ ಇಲಾಖೆಯ ಹೊಸ ಮಾರ್ಗಸೂಚಿ
ಸುಳ್ಯ: ಕುಮಾರ ಪರ್ವತ ಚಾರಣವನ್ನು ಮೊದಲಿನಂತೆ ಬೆಳಿಗ್ಗೆ 5:30ಕ್ಕೆ ಆರಂಭಿಸಲು ಅವಕಾಶ ನೀಡಬೇಕು ಎಂದು ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ವಿಧಾನಸಭೆಯಲ್ಲಿ ಆಗ್ರಹಿಸಿದರು. ಪ್ರಸ್ತುತ ಚಾರಣಿಗರಿಗೆ ಬೆಳಿಗ್ಗೆ 6 ಗಂಟೆಯಿಂದ ಮಾತ್ರ ಪ್ರವೇಶ ನೀಡಲಾಗುತ್ತಿರುವುದರಿಂದ, ಶಿಖರ ತಲುಪಲು ವಿಳಂಬವಾಗುತ್ತಿದೆ ಎಂದು ಅವರು ಸರ್ಕಾರದ ಗಮನ ಸೆಳೆದರು.
ಈ ಸಂಬಂಧ ಮಾತನಾಡಿದ ಅವರು, ಚಾರಣಿಗರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಹಿಂದಿನಂತೆ ಬೆಳಿಗ್ಗೆ 5:30ಕ್ಕೆ ಚಾರಣ ಆರಂಭಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಜೊತೆಗೆ ಶೇಷಗಿರಿ ಪರ್ವತಕ್ಕೆ ತೆರಳುವ ಮೇಲೆ ಇರುವ ನಿರ್ಬಂಧವನ್ನು ತೆರವುಗೊಳಿಸಿ, ಹಳೆಯ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಸದನದಲ್ಲಿ ಒತ್ತಾಯಿಸಿದರು.
ಈ ಮನವಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಪೂರಕವಾಗಿ ಸ್ಪಂದಿಸಿದ್ದು, ಚಾರಣಿಗರ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.