ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆ ಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರರವರಿಗೆ ಶೈಕ್ಷಣಿಕ ಸೇವಾ ಸಾಧಕ ಪ್ರಶಸ್ತಿ
ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಪುತ್ತೂರು ಮತ್ತು ಕಡಬ ತಾಲೂಕು ಘಟಕದಿಂದ ಮಾ. 15 ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನ ದಲ್ಲಿ ಶಾಲಾ ಶಿಕ್ಷಣ ಇಲಾಖೆಯ ನೌಕರರ ಜಿಲ್ಲಾ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು.
ಈ ಸಮಾರಂಭ ದಲ್ಲಿ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆ ನರಿಮೊಗರು ಇಲ್ಲಿನ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ ಇವರಿಗೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸೇವಾ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಸಂಸ್ಥೆಯನ್ನು ಹುಟ್ಟು ಹಾಕಿ ಶೈಕ್ಷಣಿಕ ಕ್ರಾಂತಿಯನ್ನು ಉಂಟು ಮಾಡಿದ ಸಾಧನೆಯನ್ನು ಮನಗಂಡು ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು ಟಿ ಖಾದರ್, ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಹಾಗೂ ಗಣ್ಯ ಅತಿಥಿಗಳು ಉಪಸ್ಥಿತರಿದ್ದರು.
ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಗುರುಗಳು, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.