ಕೆವಿಜಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ: ಮಾ.25ರಿಂದ ಆನ್‌ಲೈನ್ ಪರೀಕ್ಷೆ
ಸೂಲ್ಯ: 2026-27ನೇ ಶೈಕ್ಷಣಿಕ ವರ್ಷದಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪ್ರವೇಶ ಪಡೆಯುವ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಕಲಿಕೆಗೆ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ಬಿ ಚೇರ್ಮನ್ ಡಾ. ರೇಣುಕಾಪ್ರಸಾದ್ ಕೆ.ವಿ. ತಿಳಿಸಿದ್ದಾರೆ.
ಈ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ನಡೆಸಲಾಗುವ ಕೆ.ವಿ.ಜಿ. ಸ್ಕಾಲರ್ಶಿಪ್ ಪರೀಕ್ಷೆ ಮಾ.25ರಿಂದ ಆರಂಭವಾಗಲಿದೆ. ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪರೀಕ್ಷೆಯ ಅಂಕಗಳು, ಟ್ರಸ್ಟ್ ಸ್ಕೋರ್ (ಎ.ಬಿ. ಆಧಾರಿತ ಪರೀಕ್ಷಾ ಪ್ರಾಮಾಣಿಕತೆ ಸೂಚ್ಯಂಕ), ಗ್ರಾಮೀಣ ಹಿನ್ನೆಲೆ (ಇದ್ದಲ್ಲಿ) ಹಾಗೂ ಪೋಷಕರ ವಾರ್ಷಿಕ ಆದಾಯಗಳನ್ನು ಪರಿಗಣಿಸಲಾಗುವುದು.
ಆಯ್ಕೆಯಾದ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕಾಲೇಜಿನ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ರೂಪದಲ್ಲಿ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಈ ಪರೀಕ್ಷಾ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ.
ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಯಾವುದೇ ದಿನ, ಯಾವುದೇ ಸಮಯದಲ್ಲಿ ಒಂದು ಗಂಟೆಯ ಅವಧಿಯಲ್ಲಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ಮೂಲಕ ಪರೀಕ್ಷೆಯನ್ನು ಬರೆಯಬಹುದಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಮಾ.25ರಂದು ಕಾಲೇಜಿನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.