46
- ಯುಗಾದಿ ಹಬ್ಬದ ಸಂಭ್ರಮ: ಸುಳ್ಯದ ಮುಳಿಯ ಕೃಷ್ಣ ಭಟ್ ಸನ್ಸ್ ಜ್ಯುವೆಲ್ಲರ್ಸ್‌ನಲ್ಲಿ ವಿಶೇಷ ರಿಯಾಯಿತಿ ಘೋಷಣೆ
ಸುಳ್ಯ ನಗರದ ಮುಖ್ಯರಸ್ತೆಯ ಕೊಯಿಂಗೋಡಿ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಕೃಷ್ಣ ಭಟ್ ಸನ್ಸ್ ಜ್ಯುವೆಲ್ಲರ್ಸ್‌ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ.

ಸಮೃದ್ಧಿಯ ಸಂಕೇತವಾದ ಯುಗಾದಿ ಹಬ್ಬವನ್ನು ಅಂಗವಾಗಿ ಮಾರ್ಚ್ 17ರಿಂದ ಆರಂಭವಾದ ಈ ವಿಶೇಷ ರಿಯಾಯಿತಿ ಮಾರ್ಚ್ 31ರವರೆಗೆ ಮುಂದುವರಿಯಲಿದೆ. ಈ ಅವಧಿಯಲ್ಲಿ ಚಿನ್ನಾಭರಣ ಖರೀದಿಸಲು ಗ್ರಾಹಕರಿಗೆ ಅನುಕೂಲವಾಗುವಂತೆ ಆಕರ್ಷಕ ಆಫರ್‌ಗಳನ್ನು ನೀಡಲಾಗುತ್ತಿದೆ.

ವಿಶೇಷ ರಿಯಾಯಿತಿಯ ಪ್ರಯೋಜನ ಪಡೆದುಕೊಳ್ಳಲು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗೆ ಆಗಮಿಸುತ್ತಿದ್ದು, ವಿವಿಧ ವಿನ್ಯಾಸಗಳ ವೈಶಿಷ್ಟ್ಯಮಯ ಚಿನ್ನಾಭರಣಗಳು ಗ್ರಾಹಕರ ಗಮನ ಸೆಳೆಯುತ್ತಿವೆ. ಸಂಸ್ಥೆಯ ಮಾಲಕರು ಹಾಗೂ ಸಿಬ್ಬಂದಿಗಳ ಉತ್ತಮ ಸೇವೆ ಮತ್ತು ಗ್ರಾಹಕ ಸ್ನೇಹಿ ಮನೋಭಾವವು ಖರೀದಿದಾರರನ್ನು ಆಕರ್ಷಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ.