ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಂದ ಶ್ರಮದಾನ
ಎಣ್ಮೂರು: ಎಣ್ಮೂರು ಸರಕಾರಿ ಪ್ರೌಢಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಗರಡಿಯಲ್ಲಿ ನಡೆದ ಸೇವಾ ಕಾರ್ಯದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಪ್ರಸಾದ ತುಂಬಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು. ಈ ಶ್ರಮದಾನದಲ್ಲಿ ಸುಮಾರು 21 ಸ್ಕೌಟ್ಸ್ ಹಾಗೂ 26 ಗೈಡ್ಸ್ ಭಾಗವಹಿಸಿದರು.
ಸ್ಕೌಟ್ಸ್ ಶಿಕ್ಷಕರಾದ ಲಿಂಗಪ್ಪ ಬೆಳ್ಳಾರೆ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗರಡಿ ಪರಿಸರವನ್ನು ಸ್ವಚ್ಛಗೊಳಿಸುವುದರ ಜೊತೆಗೆ ಪ್ರಸಾದವನ್ನು ಪ್ಲಾಸ್ಟಿಕ್ ಕವರ್‌ಗಳಿಗೆ ತುಂಬಿಸುವ ಮೂಲಕ ಸಹಕರಿಸಿದರು.
ಈ ಸಂದರ್ಭದಲ್ಲಿ ಶ್ರೀ ಆದಿ ನಾಗಬ್ರಹ್ಮ ಕೋಟಿ ಚೆನ್ನಯ ಗರಡಿಯ ಆನುವಂಶಿಕ ಆಡಳಿತದಾರರಾದ ರಘುನಾಥ ರೈ ಕಟ್ಟಬೀಡು, ಕೇರ್ಪಡ ಮಹಿಷಮರ್ದಿನಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕನಾಥ್ ರೈ ಪಟ್ಟೆ ಹಾಗೂ ಸೀತಾರಾಮಾಂಜನೆಯ ಭಜನಾ ಮಂಡಳಿಯ ಅಧ್ಯಕ್ಷ ನಾಗೇಶ್ ರೈ ಉಪಸ್ಥಿತರಿದ್ದರು.
ಈ ಸೇವಾ ಕಾರ್ಯ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮತ್ತು ಸಮಾಜಪರ ಕಾಳಜಿಯನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಿತು.