ಉಬರಡ್ಕ: ನಂದಿನಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ – ಗಣ್ಯರಿಗೆ ಸನ್ಮಾನ
ಉಬರಡ್ಕ ಮಿತ್ತೂರು: ಶ್ರೀ ನಂದಿನಿ ಮಹಿಳಾ ಮಂಡಲದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ.22ರಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪಾನಾತ್ತಿಲ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸಾವಿತ್ರಿ ಕಣೆಮರಡ್ಕ ಅವರು ಮಹಿಳಾ ಹಕ್ಕುಗಳ ಕುರಿತು ಉಪನ್ಯಾಸ ನೀಡಿ ಜಾಗೃತಿ ಮೂಡಿಸಿದರು.
ಮುಖ್ಯ ಅತಿಥಿಗಳಾಗಿ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಪ್ರೇಮಕಲಾ ಸುಳ್ಯಕೋಡಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಶ್ರೀಮತಿ ವನಿತಾ ಮೂರ್ಜೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ರೇವತಿ ರಾಮಚಂದ್ರ ಮಡಿಯಾರು, ಉಬರಡ್ಕ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಸುಜಾತ ಭಾಸ್ಕರ ರಾವ್, ನಂದಿನಿ ಮಹಿಳಾ ಮಂಡಲದ ಸ್ಥಾಪಕ ಸಂಚಾಲಕಿ ಶ್ರೀಮತಿ ಶಾರದಾ ಡಿ. ಶೆಟ್ಟಿ ಹಾಗೂ ನಿವೃತ್ತ ಅಧ್ಯಾಪಕಿ ಶ್ರೀಮತಿ ಜಾನಕಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳೆಯರ ಸಬಲೀಕರಣದ ಅಗತ್ಯತೆ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ಹೈಲೈಟ್ ಮಾಡಲಾಯಿತು.