39
ಎಣ್ಮೂರು ನೇಮೋತ್ಸವ ಪೂರ್ವಭಾವಿ ಸಿದ್ಧತೆ: ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಶ್ರಮದಾನ
ಪುತ್ತೂರು: ಎಣ್ಮೂರು ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವವು ಏಪ್ರಿಲ್ 1ರಂದು ಅದ್ಧೂರಿಯಾಗಿ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ.
ಈ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕರು ಗರಡಿಯ ಒಳಾಂಗಣ ಹಾಗೂ ಹೊರಾಂಗಣ ಪ್ರದೇಶದಲ್ಲಿ ವ್ಯಾಪಕವಾಗಿ ಸ್ವಚ್ಛತಾ ಕಾರ್ಯವನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಕಟ್ಟಬೀಡು ರಾಮಕೃಷ್ಣ ಶೆಟ್ಟಿ, ಅನೂಪ್ ಅಳ್ವ ಸೇರಿದಂತೆ ಹಲವರು ಉಪಸ್ಥಿತರಿದ್ದು, ನೇಮೋತ್ಸವ ಯಶಸ್ವಿಗಾಗಿ ಸಹಕಾರ ನೀಡಿದರು.