37
ಡಾ|| ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ‘ಸಿದ್ಧಶ್ರೀ ಪ್ರಶಸ್ತಿ’ ಗೌರವ
ತುಮಕೂರು: ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟದಲ್ಲಿ ಜೂನ್ 21ರಂದು ಜಗದ್ಗುರು ರೇಣುಕಾಚಾರ್ಯ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ವೈವಿಧ್ಯಮಯ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಜರುಗಲಿವೆ.
ಈ ಸಂದರ್ಭದಲ್ಲಿ ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಮಾರಂಭ, ಉಚಿತ ಸಾಮೂಹಿಕ ಆದರ್ಶ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾವೇಶವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮಠದ ಪರವಾಗಿ ನೀಡಲಾಗುವ ಪ್ರತಿಷ್ಠಿತ ‘ಸಿದ್ಧಶ್ರೀ ಪ್ರಶಸ್ತಿ’ಯನ್ನು ಅವರಿಗೆ ಪ್ರದಾನ ಮಾಡಲಾಗುತ್ತಿದೆ.
ಈ ಕುರಿತು ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖ ಮಠದ ಪೀಠಾಧ್ಯಕ್ಷರಾದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾಹಿತಿ ನೀಡಿದ್ದು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದ್ದಾರೆ.