1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ: ಪೋಷಕರ ಗೊಂದಲಕ್ಕೆ ತೆರೆ
ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷ ಪೂರ್ಣಗೊಳಿಸಬೇಕೆಂಬ ಕಡ್ಡಾಯ ನಿಯಮಕ್ಕೆ ಸರ್ಕಾರ ಮತ್ತೊಮ್ಮೆ ಸಡಿಲಿಕೆ ನೀಡಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ 60 ದಿನಗಳ ವಿನಾಯಿತಿ ನೀಡಲಾಗಿದ್ದು, ಪೋಷಕರಲ್ಲಿ ಇದ್ದ ಗೊಂದಲಕ್ಕೆ ತೆರೆ ಬಿದ್ದಿದೆ.
ವಿಧಾನಸಭೆಯಲ್ಲಿ ಈ ಕುರಿತು ಘೋಷಣೆ ಮಾಡಿದ ಅವರು, ಹೊಸ ನಿಯಮದ ಪ್ರಕಾರ 5 ವರ್ಷ 10 ತಿಂಗಳು ಪೂರೈಸಿರುವ ಮಕ್ಕಳಿಗೂ ಒಂದನೇ ತರಗತಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಆರು ವರ್ಷ ವಯಸ್ಸಿನ ಕಟ್ಟುನಿಟ್ಟಿನ ನಿಯಮದಿಂದಾಗಿ ಹಲವಾರು ಮಕ್ಕಳು ಪ್ರವೇಶದಿಂದ ವಂಚಿತರಾಗುವ ಆತಂಕ ವ್ಯಕ್ತವಾಗಿತ್ತು. ಇದೀಗ ಸರ್ಕಾರದ ಈ ತೀರ್ಮಾನದಿಂದ ಸಾವಿರಾರು ಪೋಷಕರಿಗೆ ನಿರಾಳತೆ ದೊರೆತಿದ್ದು, ಮಕ್ಕಳ ಶೈಕ್ಷಣಿಕ ವರ್ಷ ವ್ಯರ್ಥವಾಗುವುದನ್ನು ತಪ್ಪಿಸಲು ಸಹಾಯವಾಗಲಿದೆ.
ಸರ್ಕಾರದ ಈ ಕ್ರಮವು ಶಿಕ್ಷಣ ಕ್ಷೇತ್ರದಲ್ಲಿ ಲವಚಿಕತೆಯನ್ನು ತಂದು, ಪೋಷಕರ ಬೇಡಿಕೆಗೆ ಸ್ಪಂದಿಸಿದಂತಾಗಿದೆ.