51
ಸುಳ್ಯ, ಮಾರ್ಚ್ 26:ಖ್ಯಾತ ಕವಿ ಹಾಗೂ ಸುಳ್ಯ ತಾಲೂಕಿನ ಚೊಕ್ಕಾಡಿ ನಿವಾಸಿಯಾದ ಸುಬ್ರಾಯ ಚೊಕ್ಕಾಡಿಯವರಿಗೆ ಶಿವಮೊಗ್ಗದ ಕರ್ನಾಟಕ ಸಂಘವು ನೀಡುವ ಪ್ರತಿಷ್ಠಿತ “ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ” ಜೀವಮಾನ ಸಾಧನೆಗಾಗಿ ಘೋಷಿಸಲಾಗಿದೆ.
ಈ ಪ್ರಶಸ್ತಿಯು ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅವರ ದೀರ್ಘಕಾಲದ ಸೇವೆ ಮತ್ತು ಕಾವ್ಯಸಾಧನೆಗೆ ಈ ಗೌರವ ನೀಡಲಾಗಿದೆ ಎಂದು ಸಂಘ ತಿಳಿಸಿದೆ.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲೇ ಆಯೋಜಿಸಲಾಗುವುದು ಎಂದು ಕರ್ನಾಟಕ ಸಂಘ ಪ್ರಕಟಣೆ ನೀಡಿದೆ.