37
ಕಲ್ಲುಗುಂಡಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಗಣಹೋಮ
ಕಲ್ಲುಗುಂಡಿ: ಕಲ್ಲುಗುಂಡಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ನಡೆಯಲಿರುವ ದೈವದ ಒತ್ತೆಕೋಲ ಕಾರ್ಯಕ್ರಮದ ಅಂಗವಾಗಿ ಗಣಹೋಮವು ಮಾರ್ಚ್ 27ರಂದು ಬೆಳಿಗ್ಗೆ ಭಕ್ತಿಭಾವದಿಂದ ನೆರವೇರಿತು.
ಮಾರ್ಚ್ 28, 29 ಮತ್ತು 30ರಂದು ನಡೆಯಲಿರುವ ಒತ್ತೆಕೋಲ ಮಹೋತ್ಸವದ ಪೂರ್ವಭಾವಿಯಾಗಿ ಗಣಹೋಮವನ್ನು ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು. ಪೂಜಾ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.
ಮುಂದಿನ ದಿನಗಳಲ್ಲಿ ನಡೆಯಲಿರುವ ಒತ್ತೆಕೋಲ ಕಾರ್ಯಕ್ರಮಕ್ಕೆ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೈವಸ್ಥಾನದ ವತಿಯಿಂದ ಮನವಿ ಮಾಡಲಾಗಿದೆ.