Home Uncategorizedಕುಲ್ಕುಂದ ಬಸವೇಶ್ವರ ದೇವಾಲಯ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕುಲ್ಕುಂದ ಬಸವೇಶ್ವರ ದೇವಾಲಯ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

by anamika

ಕುಲ್ಕುಂದ ಬಸವೇಶ್ವರ ದೇವಾಲಯ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕುಲ್ಕುಂದ: ಶ್ರೀ ಬಸವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ.27ರಂದು ದೇವಾಲಯದ ಆವರಣದಲ್ಲಿ ಸರಳವಾಗಿ ನೆರವೇರಿತು.

ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ ಜಾತ್ರೋತ್ಸವವನ್ನು ಭಕ್ತಿಭಾವದಿಂದ ಆಚರಿಸಲು ಎಲ್ಲರ ಸಹಕಾರವನ್ನು ಕೋರಿದರು.

ಈ ಸಂದರ್ಭದಲ್ಲಿ ಅರ್ಚಕ ಗಣೇಶ್ ದೀಕ್ಷಿತ್, ಆಡಳಿತ ಮಂಡಳಿಯ ಸದಸ್ಯರಾದ ರವೀಂದ್ರ ಕುಮಾರ್ ರುದ್ರಪಾದ, ಶೀನಪ್ಪ ಗೌಡ, ವಿಜಯ ಕುಮಾರ್ ನಡುತೋಟ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಾತ್ರಾ ಮಹೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ.

You may also like

Leave a Comment