80
ಬೆಳ್ಳಾರೆಯಲ್ಲಿ ಕುಲಾಲ ಸುಧಾರಕ ಸೇವಾ ಸಂಘದಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ಬೆಳ್ಳಾರೆ: ಕುಲಾಲ ಸುಧಾರಕ ಸೇವಾ ಸಂಘ, ಸುಳ್ಯ-ಬೆಳ್ಳಾರೆ ವತಿಯಿಂದ 29ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮಾ.29ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಭಕ್ತಿಭಾವದಿಂದ ನಡೆಯಿತು.
ಕಾರ್ಯಕ್ರಮವು ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಆರಂಭಗೊಂಡಿತು. ಮಧ್ಯಾಹ್ನ ಕುಲಾಲ ಭಜನಾ ತಂಡ, ಸುಳ್ಯ-ಬೆಳ್ಳಾರೆ ಇವರಿಂದ ಭಜನಾ ಕಾರ್ಯಕ್ರಮ ಜರುಗಿತು.
ಬಳಿಕ ಮಹಾಪೂಜೆ ನೆರವೇರಿಸಲಾಗಿ, ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ನಂತರ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.
ಸಂಘದ ಪದಾಧಿಕಾರಿಗಳು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.