105
ಡಾ. ನವೀನ್ ಕುಮಾರ್ ಪೆರುವಾಜೆಗೆ ಡಾಕ್ಟರೇಟ್ ಪದವಿ ಪ್ರದಾನ
ಮಂಗಳೂರು: ಯೆನೆಪೋಯ ವಿದ್ಯಾನಿಲಯದ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ನವೀನ್ ಕುಮಾರ್ ಪೆರುವಾಜೆಯವರಿಗೆ ಮಂಗಳೂರು ವಿಶ್ವವಿದ್ಯಾಲಯದ 44ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನಿಸಲಾಯಿತು.
ಇವರು ಮಂಗಳೂರು ವಿಶ್ವವಿದ್ಯಾಲಯದ ಮಂಗಳಗಂಗೋತ್ರಿಯ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ “ಫೈನಾನ್ಸಿಯಲ್ ಪರ್ಫಾರ್ಮೆನ್ಸ್ ಅನಾಲಿಸಿಸ್ ಆಫ್ ಸೆಲೆಕ್ಟ್ ಹೆಲ್ತ್ ಇನ್ಸೂರೆನ್ಸ್ ಕಂಪನೀಸ್ ಇನ್ ಇಂಡಿಯಾ” ಎಂಬ ವಿಷಯದ ಸಂಶೋಧನಾ ಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿ ಪಿ.ಎಚ್.ಡಿ ಪದವಿ ಪಡೆದಿದ್ದಾರೆ.
ಈ ಸಂಶೋಧನೆಯನ್ನು ವಾಣಿಜ್ಯಶಾಸ್ತ್ರ ವಿಭಾಗದ ಪ್ರೊ. ಈಶ್ವರ ಪಿ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಲಾಗಿದೆ.