Home Uncategorizedಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಕಾಲೇಜು ಉಪನ್ಯಾಸಕ ಮನೋಜ್ ಕುಮಾರ್ ಬಿ.ಎಸ್ ಅವರಿಗೆ ಡಾಕ್ಟರೇಟ್ ಪದವಿ

ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಕಾಲೇಜು ಉಪನ್ಯಾಸಕ ಮನೋಜ್ ಕುಮಾರ್ ಬಿ.ಎಸ್ ಅವರಿಗೆ ಡಾಕ್ಟರೇಟ್ ಪದವಿ

by anamika

ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಕಾಲೇಜು ಉಪನ್ಯಾಸಕ ಮನೋಜ್ ಕುಮಾರ್ ಬಿ.ಎಸ್ ಅವರಿಗೆ ಡಾಕ್ಟರೇಟ್ ಪದವಿ

 

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌ಎಸ್‌ಪಿಯು ಕಾಲೇಜಿನ ಉಪನ್ಯಾಸಕರಾದ ಮನೋಜ್ ಕುಮಾರ್ ಬಿ.ಎಸ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ (ಪಿ.ಎಚ್.ಡಿ) ಪದವಿ ಪ್ರದಾನಿಸಿದೆ.

ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಪದವಿ ಪ್ರದಾನ ಮಾಡಿದರು.

ಮನೋಜ್ ಕುಮಾರ್ ಅವರು “ದಕ್ಷಿಣ ಕನ್ನಡ ಜಿಲ್ಲೆಯ ಸಣ್ಣ ರೈತರ ಕುರಿತು ವಿಶೇಷ ಉಲ್ಲೇಖದೊಂದಿಗೆ ಅಡಿಕೆ ಬೆಳೆಯ ಆರ್ಥಿಕತೆ” (Economics of Arecanut Cultivation with Special Reference to Small Farmers of Dakshina Kannada District) ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ್ದರು. ಈ ಸಂಶೋಧನೆಗೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸ್ಮಾರಕ ಮಹಾವಿದ್ಯಾಲಯದ ನಿವೃತ್ತ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಡಾ. ತಿಮ್ಮಯ್ಯ ಟಿ.ಡಿ ಅವರು ಮಾರ್ಗದರ್ಶನ ನೀಡಿದ್ದರು.

ಅಜ್ಜಾವರ ಗ್ರಾಮದ ಅತ್ಯಡ್ಕ ನಿವಾಸಿಗಳಾದ ದಿ. ಶ್ರೀಧರ್ ಮತ್ತು ಕಮಲಾಕ್ಷಿ ದಂಪತಿಗಳ ಪುತ್ರರಾಗಿರುವ ಮನೋಜ್ ಕುಮಾರ್ ಅವರ ಸಾಧನೆಗೆ ಶಿಕ್ಷಣ ವಲಯದಿಂದ ಅಭಿನಂದನೆಗಳು ವ್ಯಕ್ತವಾಗಿವೆ.

You may also like

Leave a Comment