ಪುತ್ತೂರಿನಲ್ಲಿ ಸಾಫ್ಟ್‌ವೇರ್ ಕ್ರಾಂತಿ: ವಿದ್ಯಾಮಾತಾ ಅಕಾಡೆಮಿಯಿಂದ “CODE-ARCHITECT” ಕೋರ್ಸ್ ಅನಾವರಣ
ಪುತ್ತೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿ, ಯುವಜನತೆಯನ್ನು ಜಾಗತಿಕ ಮಟ್ಟದ ಸಾಫ್ಟ್‌ವೇರ್ ತಂತ್ರಜ್ಞರನ್ನಾಗಿ ರೂಪಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಉದ್ಯೋಗ ಕೌಶಲ್ಯ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಹೊಸ ಹೆಜ್ಜೆ ಇಟ್ಟಿದೆ. ಸಂಸ್ಥೆಯು “CODE-ARCHITECT” ಎಂಬ ವಿಶಿಷ್ಟ ತರಬೇತಿ ಕೋರ್ಸ್ ಅನ್ನು ಅನಾವರಣಗೊಳಿಸಿದೆ.
ಇಂದಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ಕೇವಲ ಪದವಿ ಅಥವಾ ಸ್ನಾತಕೋತ್ತರ ಪದವಿಗಳು ಮಾತ್ರ ಉದ್ಯೋಗಕ್ಕೆ ಸಾಕಾಗುವುದಿಲ್ಲ ಎಂಬ ವಾಸ್ತವವನ್ನು ಮನಗಂಡಿರುವ ಅಕಾಡೆಮಿಯು, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುವ ತರಬೇತಿಯನ್ನು ನೀಡಲು ಮುಂದಾಗಿದೆ. ಸಾಫ್ಟ್‌ವೇರ್ ಕ್ಷೇತ್ರದ ನುರಿತ ತಜ್ಞರ ಮಾರ್ಗದರ್ಶನದಲ್ಲಿ ಕೋಡಿಂಗ್ ಹಾಗೂ ಸಾಫ್ಟ್‌ವೇರ್ ಅಭಿವೃದ್ಧಿಯ ನೈಜ ಅನುಭವವನ್ನು ವಿದ್ಯಾರ್ಥಿಗಳಿಗೆ ಕಲಿಸಿಕೊಡಲಾಗುತ್ತದೆ.
ಈ ಕೋರ್ಸ್ ಕೇವಲ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿಲ್ಲ. ತಂತ್ರಜ್ಞಾನದಲ್ಲಿ ಆಸಕ್ತಿ ಹೊಂದಿರುವ 10ನೇ ತರಗತಿ, ಪಿಯುಸಿ, ಡಿಪ್ಲೋಮಾ ವಿದ್ಯಾರ್ಥಿಗಳು ಹಾಗೂ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿರುವವರು ಸಹ ಇದರ ಪ್ರಯೋಜನ ಪಡೆಯಬಹುದು.

ಉದ್ಯೋಗಾವಕಾಶಗಳ ದೃಷ್ಟಿಯಿಂದಲೂ ಈ ಯೋಜನೆ ಮಹತ್ವ ಪಡೆದಿದ್ದು, ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ನೂರಾರು ಕಂಪನಿಗಳೊಂದಿಗೆ ಕೈಜೋಡಿಸಿ ಸಾವಿರಾರು ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ಉದ್ಯೋಗ ಕಲ್ಪಿಸಿರುವ ಹೆಗ್ಗಳಿಕೆಯನ್ನು ಹೊಂದಿದೆ. ಹೊಸ “CODE-ARCHITECT” ಕೋರ್ಸ್ ಮೂಲಕ ವಿದ್ಯಾರ್ಥಿಗಳ ಕನಸಿನ ಉದ್ಯೋಗಗಳಿಗೆ ಅಗತ್ಯವಿರುವ ತಾಂತ್ರಿಕ ಅಡಿಪಾಯವನ್ನು ಬಲಪಡಿಸುವುದು ಸಂಸ್ಥೆಯ ಉದ್ದೇಶವಾಗಿದೆ.