Home Uncategorizedದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ  ಡಿಜಿಲಾಕರ್‌ನಲ್ಲೂ ಅಂಕಪಟ್ಟಿ ಲಭ್ಯ

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ  ಡಿಜಿಲಾಕರ್‌ನಲ್ಲೂ ಅಂಕಪಟ್ಟಿ ಲಭ್ಯ

by anamika

 ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ

 ಡಿಜಿಲಾಕರ್‌ನಲ್ಲೂ ಅಂಕಪಟ್ಟಿ ಲಭ್ಯ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಕುರಿತ ಗೊಂದಲಕ್ಕೆ ತೆರೆ ಬಿದ್ದಿದ್ದು, ಏಪ್ರಿಲ್ 9ರಂದು ಫಲಿತಾಂಶ ಪ್ರಕಟಿಸುವುದು ಬಹುತೇಕ ನಿಶ್ಚಿತವಾಗಿದೆ ಎಂದು ಪರೀಕ್ಷಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಶಿಕ್ಷಣ ಸಚಿವ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶ ಪ್ರಕಟವಾದ ದಿನ ಮಧ್ಯಾಹ್ನ 12 ಗಂಟೆಯಿಂದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

ಈ ಬಾರಿ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 1217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ಪ್ರಕಟಿಸುವುದಾಗಿ ಸಚಿವರು ಹೇಳಿದ್ದರೂ, ಮೌಲ್ಯಮಾಪನದ ಅಂತಿಮ ಹಂತದ ಕೆಲಸಗಳು ಬಾಕಿ ಉಳಿದ ಹಿನ್ನೆಲೆ ಪ್ರಕಟಣೆ ವಿಳಂಬವಾಗಿತ್ತು. ಏಪ್ರಿಲ್ 7ರಂದು ಪ್ರಕಟವಾಗಬೇಕಿದ್ದ ಫಲಿತಾಂಶ ಮುಂದೂಡಿಕೆಯಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಉಂಟಾಗಿತ್ತು.

ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ನೋಡುವ ವಿಧಾನ

  • ಅಧಿಕೃತ ವೆಬ್‌ಸೈಟ್: karresults.nic.in ಗೆ ಭೇಟಿ ನೀಡಿ
  • ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ
  • ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ
  • ‘Submit’ ಒತ್ತಿದ ಬಳಿಕ ಅಂಕಪಟ್ಟಿ ಲಭ್ಯವಾಗುತ್ತದೆ

ಫಲಿತಾಂಶವನ್ನು karresults.nic.in ಹಾಗೂ kseab.karnataka.gov.in ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡಿಜಿಲಾಕರ್ (digilocker.gov.in) ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಮಾರ್ಕ್ಸ್, ಶೇಕಡಾವಾರು ಹಾಗೂ ಟಾಪರ್‌ಗಳ ಪಟ್ಟಿ ಕೂಡ ಪ್ರಕಟವಾಗಲಿದೆ.

You may also like

Leave a Comment