ಎಸ್.ಟಿ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶಾವಕಾಶ
2026-27ಕ್ಕೆ ಅರ್ಜಿ ಆಹ್ವಾನ
ಮೇ 4 ಅರ್ಜಿ ಸಲ್ಲಿಕೆಗೆ ಕೊನೆಯ ದಿನ
ಎಸ್.ಟಿ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶಾವಕಾಶ: ಅರ್ಜಿ ಆಹ್ವಾನ
ಮಂಗಳೂರು: 2026-27ನೇ ಶೈಕ್ಷಣಿಕ ಸಾಲಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡ (ಎಸ್.ಟಿ) ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ನೀಡಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನವಾಗಿದೆ.
ಜಿಲ್ಲೆಯ ವಿವಿಧ ಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗಿದ್ದು, ಶಾರದಾ ವಿದ್ಯಾಲಯ (ಕೊಡಿಯಾಲ್‍ಬೈಲ್), ಶಾರದಾ ಗಣಪತಿ ವಿದ್ಯಾಕೇಂದ್ರ (ಕೈರಂಗಳ), ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ (ಬಂಟ್ವಾಳ), ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ, ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ (ಬಂಟ್ವಾಳ), ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಉಜಿರೆ), ವಾಣಿ ಇಂಗ್ಲೀಷ್ ಆಂಗ್ಲ ಮಾಧ್ಯಮ ಶಾಲೆ (ಬೆಳ್ತಂಗಡಿ), ಸೆಕ್ರೇಡ್ ಹಾಟ್ಸ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ (ಮಡಂತ್ಯಾರು) ಸೇರಿವೆ.
ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನಿಗದಿತ ಗುರಿಗಿಂತ ಹೆಚ್ಚು ಅರ್ಜಿಗಳು ಬಂದಲ್ಲಿ, ಡಯಟ್ ಮೂಲಕ ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಬಂಧಿಸಿದ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮಂಗಳೂರಿನ ಕೊಟ್ಟಾರದಲ್ಲಿರುವ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಕಚೇರಿ (ದೂರವಾಣಿ: 0824-2451269) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.