Home Uncategorizedಎಸ್‌ಎಸ್‌ಎಲ್‌ಸಿ ಮೌಲ್ಯಮಾಪನಕ್ಕೆ ನಿಷೇಧಾಜ್ಞೆ ಜಾರಿ ಮಂಗಳೂರು ನಗರದಲ್ಲಿ ಭದ್ರತೆ ಕಟ್ಟು

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನಕ್ಕೆ ನಿಷೇಧಾಜ್ಞೆ ಜಾರಿ ಮಂಗಳೂರು ನಗರದಲ್ಲಿ ಭದ್ರತೆ ಕಟ್ಟು

by anamika

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನಕ್ಕೆ ನಿಷೇಧಾಜ್ಞೆ ಜಾರಿ
ಮಂಗಳೂರು ನಗರದಲ್ಲಿ ಭದ್ರತೆ ಕಟ್ಟು

ಮಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 7ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಕ್ರಿಯೆ ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಲು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಮಹತ್ವದ ಕ್ರಮ ಕೈಗೊಂಡಿದೆ.

ಮೌಲ್ಯಮಾಪನ ಕೇಂದ್ರಗಳ ಸುತ್ತಮುತ್ತ ಕಾನೂನು ಬಾಹಿರ ಚಟುವಟಿಕೆಗಳು ಮತ್ತು ಅಹಿತಕರ ಘಟನೆಗಳು ನಡೆಯದಂತೆ ತಡೆಯಲು, ನಗರ ವ್ಯಾಪ್ತಿಯ 7 ಮೌಲ್ಯಮಾಪನಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಈ ಕುರಿತು ಉಪ ಪೊಲೀಸ್ ಆಯುಕ್ತ ಮಿಥುನ್ ಹೆಚ್.ಎನ್ ಅವರು ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದು, ಮೌಲ್ಯಮಾಪನ ಅವಧಿಯಲ್ಲಿ ಭದ್ರತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

👉 ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಹತ್ವದ ಈ ಪ್ರಕ್ರಿಯೆ ಯಾವುದೇ ಅಡ್ಡಿಯಿಲ್ಲದೆ ನಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

You may also like

Leave a Comment