Home Uncategorizedಅರಣ್ಯದಲ್ಲಿ ಶರಣ್ಯ ಸಿಕ್ಕ ಬೆನ್ನಲ್ಲೇ ಮತ್ತೋರ್ವ ಬಾಲಕಿ ಕಾಣೆ ಚಂದ್ರದ್ರೋಣ ಪರ್ವತದಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ

ಅರಣ್ಯದಲ್ಲಿ ಶರಣ್ಯ ಸಿಕ್ಕ ಬೆನ್ನಲ್ಲೇ ಮತ್ತೋರ್ವ ಬಾಲಕಿ ಕಾಣೆ ಚಂದ್ರದ್ರೋಣ ಪರ್ವತದಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ

by anamika

ಅರಣ್ಯದಲ್ಲಿ ಶರಣ್ಯ ಸಿಕ್ಕ ಬೆನ್ನಲ್ಲೇ ಮತ್ತೋರ್ವ ಬಾಲಕಿ ಕಾಣೆ

ಚಂದ್ರದ್ರೋಣ ಪರ್ವತದಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ 14 ವರ್ಷದ ಕೇರಳ ಮೂಲದ ಬಾಲಕಿ ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಆಕೆ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದು, ಕೂಡಲೇ ಸ್ಥಳೀಯರು ಹುಡುಕಾಟ ನಡೆಸಿದ್ದರು. ಇದೀಗ ಅಗ್ನಿಶಾಮಕ, ಅರಣ್ಯ, ಪೊಲೀಸ್ ಇಲಾಖೆಗಳು ಡ್ರೋನ್ ಸಹಾಯದಿಂದ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿವೆ.

ಕೊಡಗಿನಲ್ಲಿ ಚಾರಣಕ್ಕೆಂದು ತೆರಳಿದ್ದ ಶರಣ್ಯ ನಾಪತ್ತೆಯಾಗಿ ವಾಪಸಾದ ಬೆನ್ನಲ್ಲೇ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ.

*ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ*
ಕೇರಳ ರಾಜ್ಯದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ ಪೋಷಕರೊಂದಿಗೆ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಕಾಣೆಯಾಗಿರುವುದು ತಿಳಿದುಬಂದಿದೆ. ಬಾಲಕಿ ಕಾಣೆಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ.

ಮುಂದುವರಿದ ಹುಡುಕಾಟ
ರಾತ್ರಿ ಪೂರ್ತಿ ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಸಂಯುಕ್ತವಾಗಿ ಶೋಧ ಕಾರ್ಯ ನಡೆಸಿದರು. ಇಂದೂ ಡ್ರೋನ್ ಸಹಾಯದಿಂದ ಹುಡುಕಾಟ ಮುಂದುವರಿದಿದ್ದು, ಸಂಪೂರ್ಣ ಹುಲ್ಲುಗಾವಲು ಹಾಗೂ ಇಳಿಜಾರು ಪ್ರದೇಶಗಳಿಂದ ಕೂಡಿರುವ ಈ ಪ್ರದೇಶದಲ್ಲಿ ಕಾರ್ಯಾಚರಣೆ ಸವಾಲಿನದ್ದಾಗಿದೆ. ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ನಾಪತ್ತೆಯಾಗಿರುವ ಹಿನ್ನೆಲೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ.

You may also like

Leave a Comment