Home Uncategorizedದಕ್ಷಿಣ ಕನ್ನಡ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ವೇಗ – ಸಚಿವ ದಿನೇಶ್ ಗುಂಡೂರಾವ್ ಸೂಚನೆ 🔰

ದಕ್ಷಿಣ ಕನ್ನಡ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ವೇಗ – ಸಚಿವ ದಿನೇಶ್ ಗುಂಡೂರಾವ್ ಸೂಚನೆ 🔰

by anamika

🔰 ದಕ್ಷಿಣ ಕನ್ನಡ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ವೇಗ – ಸಚಿವ ದಿನೇಶ್ ಗುಂಡೂರಾವ್ ಸೂಚನೆ 🔰

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಆರೋಗ್ಯ ಸಚಿವ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಾರಿಯಲ್ಲಿರುವ ಐದು ಪ್ರಮುಖ ಯೋಜನೆಗಳು ಪೂರ್ಣಗೊಂಡರೆ ಗ್ರಾಮೀಣ ಪ್ರದೇಶಗಳ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಹೇಳಿದರು.

ಯೋಜನೆಗಳ ಕಾಮಗಾರಿಗಳಿಗೆ ಅಡ್ಡಿಯಾಗಿರುವ ಅರಣ್ಯ ಇಲಾಖೆಯ ಭೂಮಿ ಸಂಬಂಧಿತ ಸಮಸ್ಯೆಗಳನ್ನು ತಕ್ಷಣವೇ ಸಮನ್ವಯದ ಮೂಲಕ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ವೇಳೆ, ಮಂಗಳೂರು ನಗರದ ನೀರಿನ ಲಭ್ಯತೆ ಕುರಿತು ಮಾಹಿತಿ ನೀಡಿದ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ತುಂಬೆ ಅಣೆಕಟ್ಟಿನಲ್ಲಿ ಸದ್ಯ 5.5 ಮೀಟರ್ ನೀರು ಲಭ್ಯವಿದ್ದು, ನೀರಿನ ಪೂರೈಕೆ ವ್ಯವಸ್ಥೆ ಸಮರ್ಪಕವಾಗಿದೆ ಎಂದು ತಿಳಿಸಿದ್ದಾರೆ.

ಎತ್ತರ ಪ್ರದೇಶಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಗತ್ಯವಿರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ವಿವರಿಸಲಾಗಿದೆ.

You may also like

Leave a Comment